ಚಳ್ಳಕೆರೆ: ಸರ್ಕಾರದಿಂದ ದೊರೆಯುವ ಸಂವಿಧಾನಾತ್ಮಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಈಡಿಗ ಸಮುದಾಯ ಮತ್ತಷ್ಟು ಸಂಘಟಿತವಾಗಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಕರೆ ನೀಡಿದರು.
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ಆರ್ಯ ಈಡಿಗ ಸಮಾಜದಿಂದ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾಡಿನಲ್ಲಿ ಅಲ್ಪಸಂಖ್ಯಾತವಾಗಿರುವ ಈಡಿಗ ಸಮುದಾಯದ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಅವರನ್ನು ಉತ್ತಮ
ಪ್ರಜೆಗಳನ್ನಾಗಿ ರೂಪಿಸಬೇಕು. ಇದರಿಂದ ಸಮುದಾಯ ತಾನಾಗಿಯೇ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.
ಬ್ರಹ್ಮಶ್ರೀ ನಾರಾಯಣ ಗುರು ಅವರ ಆದರ್ಶ ಹಾಗೂ ತತ್ವಗಳನ್ನು ಸದಾ ಪಾಲನೆ ಮಾಡುವ ಮೂಲಕ ಸಮುದಾಯವನ್ನು ಸಂಘಟಿಸಬೇಕು ಎಂದು ಹಿಂದುಳಿದ ವರ್ಗಗಳ ವಿಭಾಗದ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮಧುಬಂಗಾರಪ್ಪ ಹೇಳಿದರು.
ಶಾಸಕ ಟಿ. ರಘುಮೂರ್ತಿ, ಮಾಜಿ ಸಚಿವ ಶಿವಮೂರ್ತಿ ನಾಯಕ, ಕೆಪಿಪಿಸಿ ಒಬಿಸಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ನಾಗವೇಣಮ್ಮ ದೊಡ್ಡರಂಗಪ್ಪ, ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜನಪ್ಪ, ಸಂಗೀತ ನಿರ್ದೇಶಕ ಶ್ರೀಧರ್ ವಿ. ಸಂಭ್ರಮ್, ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ರವಿಕುಮಾರ್, ಯುವ ಘಟಕದ ಅಧ್ಯಕ್ಷ ವಿಭಕುಮಾರ್, ಮಹಿಳಾ ಅಧ್ಯಕ್ಷೆ ಕಲ್ಪನಾ ಅಶೋಕ್, ಮಾತನಾಡಿದರು.
ಸೋಲೂರು ಮಠದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಅವರ ಭಾವಚಿತ್ರವನ್ನು ಸಾರೋಟಿನಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಬ್ರಹ್ಮಶ್ರೀ ನಾರಾಯಣ ಗುರು ಆಚರಣಾ ಸಮಿತಿ ಯುವ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ನವೀನ್, ಮಲ್ಲಿಕಾರ್ಜುನ, ಕೆ. ಗಿರೀಶ್, ವಿಜಯ್, ಓಬಳೇಶ್, ಪೋಲಿಸ್ ನಿರೀಕ್ಷಕ ಉಮೇಶ್ ನಾಯಕ, ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ, ನಾಗರಾಜ, ಪ್ರಭು, ಮಂಜುನಾಥ್, ಉಪನ್ಯಾಸಕಿ ಯಶೋಧಮ್ಮ ಅವರೂ ಈ ಸಂದರ್ಭದಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.