ADVERTISEMENT

ಚಿತ್ರದುರ್ಗ | ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ: BY ವಿಜಯೇಂದ್ರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 8:32 IST
Last Updated 28 ಜೂನ್ 2024, 8:32 IST
   

ಚಿತ್ರದುರ್ಗ: ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ ₹ 187 ಕೋಟಿ ಹಣ ಲೂಟಿ ಹೊಡೆದಿದೆ ಎಂದು ಆರೋಪಿಸಿ‌ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ‌ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ‌ ಸೇರಿ ನೂರಾರು ಬಿಜೆಪಿ ‌ಕಾರ್ಯಕರ್ತರನ್ನು ಶುಕ್ರವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒನಕೆ ಓಬವ್ವ ಸರ್ಕಲ್ ನಲ್ಲಿ ಸೇರಿದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾರಿಕೇಡ್ ಮೇಲೇರಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿ ಬಿ.ವೈ.ವಿಜಯೇಂದ್ರ ಸ್ಥಳದಲ್ಲೇ ಇದ್ದರು.

ADVERTISEMENT

ಪೊಲೀಸರು‌ ಪ್ರತಿಭಟನಾಕಾರರನ್ನು ತಡೆದಾಗ ಮಾತಿನ ಚಕಮಕಿ ಪಡೆಯಿತು. ತಳ್ಳಾಟ, ನೂಕಾಟ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಪೊಲೀಸರು ಬಿ.ವೈ.ವಿಜಯೇಂದ್ರ ಹಾಗೂ ಮುಖಂಡರನ್ನು ವಶಕ್ಕೆ ಪಡೆದು ಕರೆದೊಯ್ದರು.

ಸಿಎಂ ರಾಜೀನಾಮೆಗೆ ಒತ್ತಾಯ; 'ಹಣಕಾಸು ಖಾತೆ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಗಮನಕ್ಕೆ ಬಾರದೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಆಗಿಲ್ಲ. ಹೀಗಾಗಿ ಪ್ರಕರಣದ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು' ಎಂದು ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.