ADVERTISEMENT

ಚಿತ್ರದುರ್ಗ: ಸಚಿವ ಡಿ.ಸುಧಾಕರ್‌ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2024, 5:57 IST
Last Updated 16 ಏಪ್ರಿಲ್ 2024, 5:57 IST
   

ನಾಯಕನಹಟ್ಟಿ (ಚಿತ್ರದುರ್ಗ): ಮತದಾರರಿಗೆ ಅನುದಾನದ ಆಮಿಷವೊಡ್ಡಿದ ಆರೋಪದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ವಿರುದ್ಧ ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರಿಗೆ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಿಂದ 70,000 ಮತಗಳ ಲೀಡ್ ನೀಡಿದರೆ ಮುಖ್ಯಮಂತ್ರಿ ವಿಶೇಷ ಅನುದಾನದಿಂದ ₹ 25 ಕೋಟಿ ಬಿಡುಗಡೆ ಮಾಡಲಾಗುವುದು. ಕ್ಷೇತ್ರ ವ್ಯಾಪ್ತಿಯ ತಳಕು ಮತ್ತು ನಾಯಕನಹಟ್ಟಿ ಹೋಬಳಿಗಳ ಅಭಿವೃದ್ಧಿ ಕಾರ್ಯಗಳಿಗೆ ಕಾಳಜಿ ತೋರಲಾಗುವುದು’ ಎಂದು ಪ್ರಚಾರ ಸಭೆಯಲ್ಲಿ ಸುಧಾಕರ್‌ ಭಾಷಣ ಮಾಡಿದ್ದರು. ಈ ಹೇಳಿಕೆಯನ್ನು ಚುನಾವಣಾಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಎಂದು ಪರಿಗಣಿಸಿದ್ದಾರೆ.

ನಾಯಕನಹಟ್ಟಿ ಪಟ್ಟಣದಲ್ಲಿ ಏ.14ರಂದು ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆ ಆಯೋಜಿಸಿತ್ತು. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಳಕು ಹಾಗೂ ನಾಯಕನಹಟ್ಟಿ ಹೋಬಳಿ ವ್ಯಾಪ್ತಿಯ ಮತದಾರರು ಸಭೆಯಲ್ಲಿ ಪಾಲ್ಗೊಂಡಿದ್ದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.