ಹಿರಿಯೂರು: ನಗರದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕ ಅದಾಲತ್ನಲ್ಲಿ ಎರಡು ವರ್ಷದ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಒಂದಾದರು.
ಇದರಿಂದ ಅದಾಲತ್ನಲ್ಲಿ ಭಾಗಿಯಾಗಿದ್ದ ಎಲ್ಲರಲ್ಲೂ ಸಂತಸ ಕಂಡುಬಂತು.
ಕೌಟುಂಬಿಕ ಕಾರಣದಿಂದ ವಿಚ್ಛೇದನಕ್ಕೆ ಈ ದಂಪತಿ 2022ರಲ್ಲಿ ಅರ್ಜಿ ಸಲ್ಲಿಸಿದ್ದರು.
ಅದಾಲತ್ನಲ್ಲಿ 27 ಸಿವಿಲ್ ಪ್ರಕರಣಗಳು ಹಾಗೂ 413 ಕ್ರಿಮಿನಲ್ ಪ್ರಕರಣಗಳು, ಬ್ಯಾಂಕ್ ಸಂಬಂಧಿತ 10 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ಈ ಮೂಲಕ ₹ 34 ಲಕ್ಷ ಪರಿಹಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ಮೊಯಿನುದ್ದೀನ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಚ್.ಡಿ. ಶ್ರೀಧರ್, ವಕೀಲರ ಸಂಘದ ಅಧ್ಯಕ್ಷ ರಂಗೇನಹಳ್ಳಿ ರಾಮಚಂದ್ರಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.