ಮೊಳಕಾಲ್ಮುರು: ಕ್ಷೇತ್ರದ ನೂತನ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರ ಸಾರ್ವಜನಿಕರ ಅಹವಾಲು ಸಲ್ಲಿಕೆ ಕಚೇರಿ ಉದ್ಘಾಟನೆಯನ್ನು ಇಲ್ಲಿ ಮೇ 29ರಂದು ಹಮ್ಮಿಕೊಳ್ಳಲಾಗಿದೆ.
ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಕಟ್ಟಡದಲ್ಲಿ ಕಚೇರಿ ಸ್ಥಾಪಿಸಿದ್ದು, ಬೆಳಿಗ್ಗೆ 9.30ಕ್ಕೆ ಉದ್ಘಾಟನೆ ನೆರವೇರಲಿದೆ. ತದ ನಂತರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಹಮ್ಮಿಕೊಳ್ಳಲಾಗಿದೆ. ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಅಧೀನ ಸಿಬ್ಬಂದಿಯನ್ನು ನಿಯೋಜಿಸದೆ ಸಭೆಗೆ ಖುದ್ದು ಭಾಗವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಇಒ ಕೆ.ಇ. ಜಾನಕೀರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.