ಚಿತ್ರದುರ್ಗ: ಇಲ್ಲಿನ ಆಶ್ರಯ ಬಡಾವಣೆಯಲ್ಲಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಭೇದಿಯ ಮಾದರಿಯಲ್ಲಿ ವಿಬ್ರಿಯೊ ಕಾಲರಾ ಬ್ಯಾಕ್ಟೀರಿಯಾ ಪತ್ತೆಯಾಗಿದೆ.
ಕವಾಡಿಗರಹಟ್ಟಿ ಸಮೀಪದ ಆಶ್ರಯ ಬಡಾವಣೆಯಲ್ಲಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆರು ಜನರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಭೇದಿ ಮಾದರಿಯನ್ನು ಬೆಂಗಳೂರಿನ ವೈದ್ಯಕೀಯ ಕಾಲೇಜು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು.
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 240ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಐವರು ಮೃತಪಟ್ಟಿದ್ದರು. ಎರಡು ವಾರಗಳ ಬಳಿಕ ಸಮೀಪದ ಆಶ್ರಯ ಬಡಾವಣೆಯಲ್ಲಿ ಕೂಡ ವಾಂತಿ-ಭೇದಿ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಇಬ್ಬರ ಭೇದಿಯ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ ಒಬ್ಬರಲ್ಲಿ ವಿಬ್ರಿಯೊ ಕಾಲರಾ ಬ್ಯಾಕ್ಟೀರಿಯಾ ಪತ್ತೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.