ಚಿತ್ರದುರ್ಗ: ಅಬಕಾರಿ ಇಲಾಖೆಯಲ್ಲಿರುವ ಭ್ರಷ್ಟಾಚಾರನ್ನು ಕಡಿವಾಣ ಹಾಕುವ ಪ್ರಕ್ರಿಯೆ ಭಾಗವಾಗಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲಾಗುವುದು ಎಂದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದರು.
‘ಇಲಾಖೆಯ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಭ್ರಷ್ಟಾಚಾರ ಹಲವು ವರ್ಷಗಳ ಕೊಡುಗೆ. ಡಿಸ್ಟಿಲರಿ ಹಾಗೂ ಮದ್ಯದಂಗಡಿ ಪರವಾನಗಿ ನವೀಕರಣವನ್ನು ಎರಡು ವರ್ಷಕ್ಕೊಮ್ಮೆ ಮಾಡುವ ಆಲೋಚನೆ ಇದೆ. ಶೀಘ್ರವೇ ಅಧಿಕಾರಿಗಳ ಸಭೆ ಕರೆದು ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ದೆಹಲಿಯಲ್ಲಿರುವ ಪಕ್ಷದ ವರಿಷ್ಠರನ್ನು ವಲಿಸಿಕೊಳ್ಳುವ ಉಮೇದಿನಲ್ಲಿ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ವಿಧಾಸಭೆಯ ವಿರೋಧ ಪಕ್ಷದ ನಾಯಕರಾಗಲು ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗುವ ಗುಂಗಿನಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇಂತಹ ರಾಜಕೀಯ ಪ್ರೇರಿತ ಹೇಳಿಕೆಗಳಿಗೆ ಹೆಚ್ಚು ಬೆಲೆ ಕೊಡುವುದಿಲ್ಲ’ ಎಂದರು.
ಕಾಂಗ್ರೆಸ್ ಮುಖಂಡರಾದ ಬಿ.ಟಿ.ಜಗದೀಶ್, ಕೃಷ್ಣಮೂರ್ತಿ, ರಘು, ಸಾದತ್, ಅಬ್ಬಾಸ್ ಇದ್ದರು.
ಲೋಕಸಭಾ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಪುತ್ರ ವಿನಯ್ ಇಂಗಿತ ವ್ಯಕ್ತಪಡಿಸಿದ್ದಾರೆ. ಪಕ್ಷ ಅವಕಾಶ ಕಲ್ಪಿಸಿದರೆ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮುಂದುವರಿಯಲಿದ್ದಾರೆ.ಆರ್.ಬಿ.ತಿಮ್ಮಾಪುರ, ಅಬಕಾರಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.