ADVERTISEMENT

‘ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗೂ ಆದ್ಯತೆ ಇರಲಿ’

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 16:08 IST
Last Updated 22 ನವೆಂಬರ್ 2024, 16:08 IST
ಹೊಳಲ್ಕೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವನ್ನು ಶಾಸಕ ಎಂ. ಚಂದ್ರಪ್ಪ ಉದ್ಘಾಟಿಸಿದರು
ಹೊಳಲ್ಕೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವನ್ನು ಶಾಸಕ ಎಂ. ಚಂದ್ರಪ್ಪ ಉದ್ಘಾಟಿಸಿದರು   

ಹೊಳಲ್ಕೆರೆ: ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗೂ ಆದ್ಯತೆ ನೀಡಬೇಕು ಎಂದು ಶಾಸಕ ಎಂ. ಚಂದ್ರಪ್ಪ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆ, ಎನ್‌ಎಸ್‌‌ಎಸ್, ಯೂತ್ ರೆಡ್‍ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬಹುದು. ಎನ್‌ಎಸ್‌‌ಎಸ್, ರೆಡ್‍ಕ್ರಾಸ್, ರೋವರ್ಸ್, ರೇಂಜರ್ಸ್‌ ಚಟುವಟಿಕೆಗಳಲ್ಲಿ ತೊಡಗುವುದರಿಂದ ನಾಯಕತ್ವದ ಗುಣ ಬೆಳೆಯುತ್ತದೆ ಎಂದರು.

ADVERTISEMENT

‘140 ಜನಸಂಖ್ಯೆಯಿರುವ ಭಾರತ ದೇಶ ಶಕ್ತಿಶಾಲಿಯಾಗಿ ಬೆಳೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ’ ಎಂದು ಹೇಳಿದರು.

‘ವಿದ್ಯಾರ್ಥಿಗಳಿಗೆ ಕೇವಲ ಅಂಕಗಳಿಕೆ ಪ್ರಮುಖವಾಗಬಾರದು. ಇದರೊಂದಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಯಬೇಕು. ಗ್ರಂಥಾಲಯವನ್ನು ಬಳಕೆ ಮಾಡಿಕೊಳ್ಳಬೇಕು. ದಿನಪತ್ರಿಕೆ ಓದಬೇಕು. ಕಂಪ್ಯೂಟರ್, ಮೊಬೈಲ್ ಕಲಿಸುವ ಜ್ಞಾನ ಹೆಚ್ಚು ಕಾಲ ಉಳಿಯುವುದಿಲ್ಲ’ ಎಂದು ಕವಿ ಚಂದ್ರಶೇಖರ ತಾಳ್ಯ ಹೇಳಿದರು.

ಪ್ರಾಂಶುಪಾಲ ಶಿವಮೂರ್ತಿ ನಾಯ್ಕ, ಪುರಸಭೆ ಸದಸ್ಯ ಪಿ.ಎಚ್. ಮುರುಗೇಶ್, ಚೇತನ್, ಜಮದಗ್ನಿ, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು  ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.