ಚಿತ್ರದುರ್ಗ: ‘ಮುರುಘಾ ಮಠದಲ್ಲಿ ಹಾಸ್ಟೆಲ್‌ನಲ್ಲಿ ತಂಗಿದ್ದ ಪುತ್ರಿ ಆರು ತಿಂಗಳಿಂದ ಕಾಣಿಸುತ್ತಿಲ್ಲ. ಪುತ್ರಿ ಸಿಗದೇ ಇದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ ಮಾಡುತ್ತೇನೆ’ ಎಂದು ಅಂಧರೊಬ್ಬರು ಆರೋಪಿಸಿದ್ದಾರೆ.
ಶುಕ್ರವಾರ ಮಠದ ಆವರಣಲ್ಲಿ ಕಾಣಿಸಿಕೊಂಡ ವ್ಯಕ್ತಿ, ಪೊಲೀಸರು ಹಾಗೂ ಮಠದ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಪುತ್ರಿ ಸಾಕ್ಷಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅವರನ್ನು ಹಲವು ತಿಂಗಳಿಂದ ನೋಡಲು ಸಾಧ್ಯವಾಗಿಲ್ಲ. ಈಗ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆಯಂತೆ. ಎಲ್ಲ ಹಾಸ್ಟೆಲ್ ಪರಿಶೀಲಿಸಿದರೂ ಮಗಳು ಪತ್ತೆಯಾಗಿಲ್ಲ’ ಎಂದು ಮಾಧ್ಯಮ ಪ್ರತಿನಿಧಿಗಳ ಎದುರು ದೂರಿದರು.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.