ADVERTISEMENT

ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಅತ್ಯಂತ ಅಮೂಲ್ಯ: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 16:34 IST
Last Updated 12 ಜುಲೈ 2024, 16:34 IST
ಧರ್ಮಪುರ ಸಮೀಪದ ರಂಗೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಜೀವದಾತೆ ಫೌಂಡೇಶನ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಉಚಿತ ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭವನ್ನು ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಿದರು
ಧರ್ಮಪುರ ಸಮೀಪದ ರಂಗೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಜೀವದಾತೆ ಫೌಂಡೇಶನ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಉಚಿತ ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭವನ್ನು ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಿದರು    

ಧರ್ಮಪುರ: ‘ಜಗತ್ತಿನಲ್ಲಿ ಶಿಕ್ಷಣ ಅತ್ಯಂತ ಅಮೂಲ್ಯವಾಗಿದ್ದು, ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕು ಎನ್ನುವುದಾದರೆ ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಬೇಕು’ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.

ಸಮೀಪದ ರಂಗೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಜೀವದಾತೆ ಫೌಂಡೇಶನ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಉಚಿತ ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಜೀವದಾತೆ ಫೌಂಡೇಶನ್ ಗ್ರಾಮೀಣ ಪ್ರದೇಶದ ಸರ್ಕಾರಿ ಮತ್ತು ಅನುದಾನಿತ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಓರೆಗಲ್ಲಾಗಿ ನಿಂತು ಸಹಾಯ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ’ ಎಂದು ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷ ಅಭಿನಂದನ್ ಅವರನ್ನು ಸ್ಮರಿಸಿದರು.

ADVERTISEMENT

ಬಿಜೆಪಿ ಮುಖಂಡ ಎನ್.ಆರ್.ಲಕ್ಷ್ಮಿಕಾಂತ್, ಮಂಡಲ ಅಧ್ಯಕ್ಷ ವಿಶ್ವನಾಥ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹನುಮಂತರಾಯ, ಜೀವದಾತೆ ಫೌಂಡೇಶನ್‌ನ ಅಭಿನಂದನ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಂಕರಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷೆ ಶಿವರಂಜನಿ ಯಾದವ್, ಮುರುಳಿ, ವೀರಮುದಿಯಪ್ಪ, ರಂಗಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಿಪ್ಪಮ್ಮ, ಶಿವಣ್ಣ, ಜಲ್ದಪ್ಪ, ಚಿದಾನಂದ್, ರಾಖೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.