ADVERTISEMENT

ಆ್ಯಪ್ ಮೂಲಕ ಬೆಳೆ ಸಮೀಕ್ಷೆ ನಮೂದಿಸಿ: ಸಹಾಯಕ ಕೃಷಿ ನಿರ್ದೇಶಕ ಕೆ.ಟಿ.ಮಂಜುನಾಥ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 14:08 IST
Last Updated 5 ಜುಲೈ 2024, 14:08 IST

ಹೊಳಲ್ಕೆರೆ: ‘ರೈತರು ತಾವು ಬೆಳೆದ ಬೆಳೆಯನ್ನು ಪಹಣಿಯಲ್ಲಿ ನಮೂದಿಸಲು ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಮಾಡಿಸಬೇಕು’ ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಟಿ.ಮಂಜುನಾಥ ತಿಳಿಸಿದ್ದಾರೆ.

‘ರೈತರು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ತಮ್ಮ ಜಮೀನಿನ ಬೆಳೆಗಳ ನೋಂದಣಿ ಮಾಡಿಕೊಳ್ಳಬೇಕು. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ನಿಖರವಾಗಿ ನಮೂದಿಸಬಹುದಾಗಿದೆ. ಇದರಿಂದ ಅತಿವೃಷ್ಟಿ, ಅನಾವೃಷ್ಟಿಯಂತಹ ಪ್ರಕೃತಿ ವಿಕೋಪಗಳಿಂದ ಆಗುವ ಅನಾಹುತಗಳಿಗೆ ಪರಿಹಾರ ಪಡೆಯಬಹುದು. ಇದರಿಂದ ಸರ್ಕಾರದ ಬೆಂಬಲ ಬೆಲೆ ಪಡೆಯಲು ಅನುಕೂಲವಾಗುತ್ತದೆ’ ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಟಿ.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT