ಚಳ್ಳಕೆರೆ: ಕನ್ನಡ ಭಾಷೆ ಮತ್ತು ಆಸ್ಮಿತೆ ಉಳಿವಿಗೆ ನಾಡಿನ ಜನರು ಮುಂದಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ತಿಳಿಸಿದರು.
ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ತಾಲ್ಲೂಕು ಘಟಕದಿಂದ ಶನಿವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ನಂಜುಂಡಪ್ಪ ವರದಿ ಅನುಸಾರ ವೈದ್ಯಕೀಯ, ತಾಂತ್ರಿಕ ಮತ್ತು ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸಬೇಕು. ಅನ್ಯಭಾಷೆ ಗೌರವಿಸುವ ಮೂಲಕ ನಿತ್ಯ ಬದುಕಿನಲ್ಲಿ ಹೆಚ್ಚು ಕನ್ನಡ ಬಳಕೆ ಮಾಡುವಂತೆ ಮಕ್ಕಳಿಗೆ ತಿಳಿವಳಿಕೆ ನೀಡಬೇಕು ಎಂದು ಹೇಳಿದರು.
ಕೆಪಿಪಿಸಿ ಕುಶಲಕರ್ಮಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಮಾತನಾಡಿದರು. ಪತ್ರಕರ್ತ ರಾಘವೇಂದ್ರ, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ, ಗೌರವಾಧ್ಯಕ್ಷ ಭೋಜರಾಜ, ಉಪಾಧ್ಯಕ್ಷ ಬಾಲರಾಜ, ಪ್ರಧಾನ ಕಾರ್ಯದರ್ಶಿ ಮರಿಕುಂಟೆ ಚಂದ್ರಣ್ಣ, ಯುವ ಘಟಕದ ಅಧ್ಯಕ್ಷ ರವಿಕುಮಾರ್, ಕಾರ್ಮಿಕ ಸಂಘಟನೆ ಅಧ್ಯಕ್ಷ ಮಂಜುನಾಥ, ಸಂಘಟನಾ ಕಾರ್ಯದರ್ಶಿ ಮುರಳಿ, ಸಿ.ಎನ್.ಮಾರುತಿ, ನಾಯಕನಹಟ್ಟಿ ಹೋಬಳಿ ಘಟಕದ ಅಧ್ಯಕ್ಷ ಪ್ರಕಾಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.