ಹೊಳಲ್ಕೆರೆ: ಮದ್ಯವ್ಯಸನ ಬಿಟ್ಟು ಹೊಸ ಜೀವನ ಕಟ್ಟಿಕೊಳ್ಳಬೇಕು ಎಂದು ಸಂಸದ ಗೋವಿಂದ ಕಾರಜೋಳ ಸಲಹೆ ನೀಡಿದರು.
ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ 1,818ನೇ ಮದ್ಯವರ್ಜನ ಶಿಬಿರದಲ್ಲಿ ಅವರು ಮಾತನಾಡಿದರು.
‘ಮದ್ಯಪಾನದಿಂದ ಹಣ, ಆರೋಗ್ಯ, ಗೌರವ ಹಾಳಾಗುತ್ತದೆ. ಸಮಾಜದಲ್ಲಿ ಜನ ಮದ್ಯಪಾನಿಗಳನ್ನು ಕೆಟ್ಟ ದೃಷ್ಟಿಯಲ್ಲಿ ನೋಡುತ್ತಾರೆ. ಇದರಿಂದ ಕುಟುಂಬದ ನೆಮ್ಮದಿ ಹಾಳಾಗುತ್ತದೆ. ಮದ್ಯಪಾನ ತ್ಯಜಿಸಿ ಹೊಸ ಜೀವನ ಕಟ್ಟಿಕೊಂಡರೆ ಸಮಾಜದಲ್ಲಿ ಮರ್ಯಾದೆ ಸಿಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಮದ್ಯವರ್ಜನ ಶಿಬಿರಗಳನ್ನು ಏರ್ಪಡಿಸುವ ಮೂಲಕ ಮದ್ಯಪಾನಿಗಳನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಮಾಡುತ್ತಿದೆ’ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಮಾರುತೇಶ್, ಸದಸ್ಯರಾದ ದೇವರಾಜ್, ರಮೇಶ್ ಗೌಡ್ರು, ಸರಸ್ವತಿ, ಸಿಂಧೂ, ಅಶೋಕ್, ಮೋಹನ್ ನಾಗರಾಜ್, ಪ್ರೇಮಕಲಾ, ಗಿರೀಶ್, ಮುರುಳಿ, ರುದ್ರಮ್ಮ, ಸಂತೋಷ್, ಜಿಲ್ಲಾ ಯೋಜನಾ ನಿರ್ದೇಶಕ ದಿನೇಶ್ ಪೂಜಾರಿ, ಎಸ್.ವಸಂತ್, ಕೃಷಿ ಮೇಲ್ವಿಚಾರಕ ತಿರುಪತಿ, ರಂಜಿತಾ, ಗ್ರಾಮ ಪಂಚಾಯಿತಿ ಸದಸ್ಯರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.