ಹಿರಿಯೂರು: ಇಲ್ಲಿನ ನಗರಸಭೆಯ ಎರಡನೇ ಅವಧಿಯ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆ.ಆರ್. ಅಜಯ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಸಿ. ಅಂಬಿಕಾ ಅವಿರೋಧವಾಗಿ ಆಯ್ಕೆಯಾದರು.
ಹಿಂದುಳಿದ ವರ್ಗ (ಎ)ಗೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ಹತ್ತು ಸದಸ್ಯರ ನಡುವೆ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ 22ನೇ ವಾರ್ಡ್ ಸದಸ್ಯ ಜೆ.ಆರ್. ಅಜಯ್ ಕುಮಾರ್ ಅವರಿಗೆ ಅದೃಷ್ಟ ಒಲಿಯಿತು. ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಇಲ್ಲದ ಕಾರಣ ನಿರೀಕ್ಷೆಯಂತೆ ಸಿ. ಅಂಬಿಕಾ ಆಯ್ಕೆಯಾದರು.
ನಗರದ ಪ್ರಧಾನ ರಸ್ತೆ ವಿಸ್ತರಣೆ ಕಾಮಗಾರಿಯನ್ನು ಪ್ರವಾಸಿ ಮಂದಿರ ವೃತ್ತದಿಂದ ವೇದಾವತಿ ಸೇತುವೆವರೆಗೆ ಆರಂಭಿಸಲಾಗಿದೆ. ರಸ್ತೆ ಬದಿಯ ಮರಗಳನ್ನು ತೆರುವಗೊಳಿಸುವ ಕಾರ್ಯ ಪೂರ್ಣಗೊಂಡಿದೆ. ವೇದಾವತಿ ಸೇತುವೆಯಿಂದ ಗಾಂಧಿವೃತ್ತದವರೆಗೆ ರಸ್ತೆ ವಿಸ್ತರಣೆ ಆಗಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದ್ದು, ಹೆಚ್ಚಿನ ಒತ್ತು ನೀಡಲಾಗುವುದು ಎಂದು ನೂತನ ಅಧ್ಯಕ್ಷ ಜೆ.ಆರ್. ಅಜಯ್ ಕುಮಾರ್ ಭರವಸೆ ನೀಡಿದರು.
ಅಭಿವೃದ್ಧಿ ಕಾರ್ಯದ ವಿಚಾರದಲ್ಲಿ ಅಧ್ಯಕ್ಷರಿಗೆ ಎಲ್ಲಾ ಸಹಕಾರ ನೀಡುವುದಾಗಿ ಸಿ.ಅಂಬಿಕಾ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.