ಹೊಳಲ್ಕೆರೆ: ಚೆಕ್ ಬೌನ್ಸ್ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿ ಬಿ.ಎಂ.ಅರ್.ತೇಜಸ್ವಿ ಅವರಿಗೆ ಇಲ್ಲಿನ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಹಾಗೂ ₹ 4.40 ಲಕ್ಷ ದಂಡ ವಿಧಿಸಿದೆ.
ಎ.ಸಿದ್ದೇಶಪ್ಪ ಅವರು ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ನ್ಯಾಯಾಧೀಶರು, ಚೆಕ್ ನೀಡಿ ವಂಚಿಸಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.
ಸಿದ್ದೇಶಪ್ಪ ಪರವಾಗಿ ವಕೀಲ ಆರ್.ಹನುಮಂತಪ್ಪ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.