ADVERTISEMENT

ಪ್ರತಿಭೆಗಳನ್ನು ಗುರುತಿಸುವ ಕೆಲಸವಾಗಲಿ: ಶಾಸಕ ಬಿ.ಜಿ. ಗೋವಿಂದಪ್ಪ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 14:24 IST
Last Updated 22 ಜುಲೈ 2024, 14:24 IST
<div class="paragraphs"><p>ಹೊಸದುರ್ಗದಲ್ಲಿ ಭಾನುವಾರ ಆಯೋಜಿಸಿದ್ದ ಕನಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಬಿ.ಜಿ. ಗೋವಿಂದಪ್ಪ ಉದ್ಘಾಟಿಸಿದರು</p></div>

ಹೊಸದುರ್ಗದಲ್ಲಿ ಭಾನುವಾರ ಆಯೋಜಿಸಿದ್ದ ಕನಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಬಿ.ಜಿ. ಗೋವಿಂದಪ್ಪ ಉದ್ಘಾಟಿಸಿದರು

   

ಹೊಸದುರ್ಗ: ಸಮಾಜದಲ್ಲಿ ಇನ್ನೂ ಹೆಚ್ಚಿನ ಪ್ರತಿಭಾವಂತರಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿನ ಪ್ರತಿಭಾನ್ವಿತರನ್ನು ಗುರುತಿಸಿ ಗೌರವಿಸುವ ಕಾರ್ಯವಾಗಬೇಕು ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಸೂಚಿಸಿದರು.

ಕನಕ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ಪಟ್ಟಣದ ಶಿವಗಂಗಾ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಸಂಘದ 25ನೇ ವರ್ಷದ ಸಂಭ್ರಮಾಚರಣೆ ಹಾಗೂ ಕನಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು

ADVERTISEMENT

‘ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದನೆ ಸಲ್ಲಿಸುತ್ತಿರುವುದು ಶ್ಲಾಘನೀಯ. ಸಂಘ ಇದೇ ರೀತಿ ಹೆಚ್ಚಿನ ಸಂಘಟನೆಯಲ್ಲಿ ತೊಡಗಿಕೊಂಡು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಬೇಕು. ಮಕ್ಕಳು ಉತ್ತಮ ವಿದ್ಯಾಭ್ಯಾಸದ ಜೊತೆಗೆ ಸಂಸ್ಕಾರ ಕಲಿತು ಪೋಷಕರ ಹೆಸರು ಉಳಿಸುವಂತಾಗಬೇಕು. ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು’ ಎಂದು ಸಲಹೆ ನೀಡಿದರು.

ಈ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಗೌರವ ಸಮರ್ಪಣೆ ನೇರವೇರಿಸಲಾಯಿತು.

ಕನಕ ನೌಕರರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಕೆ.‌ವಿ. ಮಹಾಂತೇಶ್, ಕಾರ್ಯದರ್ಶಿ ಬಿ.ಶಿವಮೂರ್ತಿ, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ್ ಗೊರವಿನಕಲ್ಲು, ನಿರ್ದೇಶಕರಾದ ರೇಖಾ ಕಾಂತರಾಜ್, ಹಿರಿಯ ಉಪಾಧ್ಯಕ್ಷ ಗಂಗಾಧರಸ್ವಾಮಿ, ವೈದ್ಯರಾದ ಎನ್.ರವಿ, ಡಾ.ಪರಮೇಶ್, ಡಾ.ವಿಜಯಲಕ್ಷ್ಮಿ, ಡಾ.ರಾಘವೇಂದ್ರ ಪ್ರಸಾದ್, ನೋಂದಣಿ ಉಪ ಮಹಾಪರಿವೀಕ್ಷಕರಾದ ಜೆ.ವಿ. ಯಶೋಧರ, ಕುರುಬರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಮಂಜುನಾಥ್, ಟಿಎಪಿಸಿಎಂಎಸ್ ಅಧ್ಯಕ್ಷ ಕಾರೇಹಳ್ಳಿ ಬಸವರಾಜ್, ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಚ್.ಟಿ. ಜಯಣ್ಣ, ಸೌಹಾರ್ದ ಸಹಕಾರ ಬ್ಯಾಂಕ್ ಅಧ್ಯಕ್ಷ ಆಗ್ರೋ ಶಿವಣ್ಣ, ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಎಂ.ಎಚ್. ಕೃಷ್ಣಮೂರ್ತಿ, ಸಹಾಯಕ ಕೃಷಿ ನಿರ್ದೇಶಕ ಸಿ.ಎಸ್. ಈಶ, ಭಾರತ್ ಸೇವಾದಳದ ಅಧ್ಯಕ್ಷ ಎಂ.ಆರ್.ಸಿ ಮೂರ್ತಿ, ಮುಖಂಡರಾದ ಕೆ.ಆರ್. ಶಾಂತಮೂರ್ತಿ, ಎಚ್.ಸಿ.ಶ್ರೀಧರ್ ಮೂರ್ತಿ, ಬಿ.ತಿಪ್ಪೇಶ್ ಸೇರಿ ಹಲವರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.