ಚಿತ್ರದುರ್ಗ: ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಗೂಳಿಹಟ್ಟಿ ಡಿ. ಶೇಖರ್ ಅವರಿಗೆ ಸೋಮವಾರ ಕೋವಿಡ್ ದೃಢಪಟ್ಟಿದೆ.
ಅವರಿಗೆ ಭಾನುವಾರ ಅನಾರೋಗ್ಯ ಕಾಣಿಸಿಕೊಂಡಿತ್ತು. ಕೆಮ್ಮು, ಜ್ವರ ಬಂದಿದ್ದರಿಂದ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಸೋಮವಾರ ಲಭ್ಯವಾದ ವರದಿಯಲ್ಲಿ ಕೋವಿಡ್ ಇರುವುದು ಗೊತ್ತಾಗಿದೆ.
ಶಾಸಕರು ಹೊಸದುರ್ಗ ಪಟ್ಟಣದ ಮನೆಯಲ್ಲೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.