ಹಿರಿಯೂರು: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024–25 ನೇ ಶೈಕ್ಷಣಿಕ ಸಾಲಿನ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ಮಹಮದ್ ಜಬೀವುಲ್ಲಾ ತಿಳಿಸಿದ್ದಾರೆ.
ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್ (ಎಂಎಂವಿ), ಮೆಕ್ಯಾನಿಕ್ ರೆಫ್ರಿಜರೇಷನ್ ಆ್ಯಂಡ್ ಏರ್ ಕಂಡಿಷನ್ (ಎಂಆರ್ ಆ್ಯಂಡ್ ಎಸಿ), ಟರ್ನರ್, ಮೆಕ್ಯಾನಿಕ್ ಎಲೆಕ್ಟ್ರಿಕಲ್ ವೆಹಿಕಲ್ (ಎಂಇವಿ), ಅಡ್ವಾನ್ಸ್ ಸಿಎನ್‌ಸಿ ಮೆಷಿನಿಂಗ್ ಹಾಗೂ ಬೇಸಿಕ್ ಡಿಸೈನರ್ ಆ್ಯಂಡ್ ವರ್ಚುಯಲ್ ವೆರಿಫೈಯರ್ (ಬಿಡಿ ಆ್ಯಂಡ್ ವಿವಿ).
ಜೂನ್ 1ರ ಒಳಗೆ ಅರ್ಜಿ ಸಲ್ಲಿಸಬೇಕು. ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಕಂಪ್ಯೂಟರ್ ಕೇಂದ್ರಗಳಲ್ಲಿ www.Cite.Karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಅಥವಾ 9844425259 ಗೆ ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.