ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಜಿಲ್ಲಾ ಘಟಕ ಮಂಗಳವಾರ ಪ್ರತಿಭಟನೆ ನಡೆಸಿತು.
ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ನಿರಂತರ ಬರಕ್ಕೆ ತುತ್ತಾಗುತ್ತಿರುವ ಜಿಲ್ಲೆಗೆ ಭದ್ರಾ ಮೇಲ್ದಂಡೆ ಆಸರೆಯಾಗಿದೆ. ಆದರೆ ಯೋಜನೆ ಪ್ರಾರಂಭದರು ಸಹ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆ ಸಮಯದಲ್ಲಿ ಮಾತ್ರ ಯೋಜನೆ ಮುನ್ನಲೆ ಬರುತ್ತದೆ. ಬಳಿಕ ಯಾವುದೇ ಜನಪ್ರತಿನಿಧಿ ಅದರ ಬಗ್ಗೆ ಮಾತನಾಡುವುದಿಲ್ಲ. ಕೂಡಲೇ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಅನುದಾನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎನ್.ಅರುಣ್ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಆಶಾ, ರೈತ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ, ಮಹಿಳಾ ರೈತ ಘಟಕದ ಅಧ್ಯಕ್ಷೆ ಪಿ.ಆಶ್ವಿನಿ, ಜಿಲ್ಲಾ ಘಟಕದ ಅಧ್ಯಕ್ಷ ರವಿಕುಮಾರ್ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.