ADVERTISEMENT

ಸೋಲಿನ ಹತಾಶೆಯಿಂದ ಬಿ.ಎಲ್.ಸಂತೋಷ ಹೇಳಿಕೆ: ಕೆ.ಎಚ್.ಮುನಿಯಪ್ಪ ತಿರುಗೇಟು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2023, 7:21 IST
Last Updated 1 ಸೆಪ್ಟೆಂಬರ್ 2023, 7:21 IST
<div class="paragraphs"><p>ಕೆ.ಎಚ್.ಮುನಿಯಪ್ಪ </p></div>

ಕೆ.ಎಚ್.ಮುನಿಯಪ್ಪ

   

ಚಿತ್ರದುರ್ಗ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡಿರುವ ಹೀನಾಯ ಸೋಲಿನ ಹತಾಶೆಯಲ್ಲಿರುವ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ಶಾಸಕರ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ತಿರುಗೇಟು ನೀಡಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಎಲ್ಲರೂ ಒಟ್ಟಾಗಿದ್ದೇವೆ. ಬಿಜೆಪಿ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಯಾರು ಬಂದರೂ ಸೇರಿಸಿಕೊಳ್ಳುತ್ತೇವೆ' ಎಂದು ಹೇಳಿದರು.

ADVERTISEMENT

ದೇಶದಲ್ಲಿ ಜಾತ್ಯಾತೀತ ಪಕ್ಷಗಳು ಪ್ರಬಲವಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯಲ್ಲಿದ್ದೇವೆ. ಕೋಲಾರ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಮಳೆ ಕೊರತೆಯಿಂದಾಗಿ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಕಾಣಿಸಿಕೊಂಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜವಾಬ್ದಾರಿಯಿಂದ ನಿಭಾಯಿಸುತ್ತಿದ್ದಾರೆ. ಮಳೆ ಆರಂಭವಾಗಿದ್ದು, ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.