ADVERTISEMENT

ಲೋಕಸಭಾ ಚುನಾವಣೆ | 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 28 ಜನವರಿ 2024, 23:30 IST
Last Updated 28 ಜನವರಿ 2024, 23:30 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಚಿತ್ರದುರ್ಗ: ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 15ರಿಂದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‘28 ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಬಿಜೆಪಿಯಂತೆ ಸುಳ್ಳು ಹೇಳುವುದಿಲ್ಲ. ಚುನಾವಣೆ ಬಗ್ಗೆ ಸಮೀಕ್ಷೆ ನಡೆಸಲಾಗಿದೆ. ಅದರ ಆಧಾರದ ಮೇರೆಗೆ ಮಾತನಾಡುತ್ತಿದ್ದೇನೆ’ ಎಂದು ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

‘ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.