ADVERTISEMENT

ಸ್ವಾತಂತ್ರ್ಯ ದಿನಾಚರಣೆ: ಅಂಬೇಡ್ಕರ್ ಭಾವಚಿತ್ರ ಇಡದ್ದಕ್ಕೆ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 13:44 IST
Last Updated 16 ಆಗಸ್ಟ್ 2024, 13:44 IST
ಮಹಾನಾಯಕ ದಲಿತ ಸೇನೆ ಪದಾಧಿಕಾರಿಗಳು ಹಿರಿಯೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು
ಮಹಾನಾಯಕ ದಲಿತ ಸೇನೆ ಪದಾಧಿಕಾರಿಗಳು ಹಿರಿಯೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು   

ಹಿರಿಯೂರು: ‘ತಾಲ್ಲೂಕಿನ ಬಾಲೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವದ ವೇಳೆ ಡಾ.ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರ ಇಡದೆ ಅವರನ್ನು ಅವಮಾನಿಸಲಾಗಿದೆ’ ಎಂದು ಮಹಾನಾಯಕ ದಲಿತ ಸೇನೆ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

‘ಘಟನೆ ಸಂಬಂಧ ಶಾಲಾ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ. ಸದಸ್ಯರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ  ಸಂಘಟನೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಕೆ.ಪಿ.ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಎನ್.ರವಿಕುಮಾರ್ ಘಾಟ್, ಮಸ್ಕಲ್ ಮಟ್ಟಿ ಓಂಕಾರ್, ಕರ್ಣಕುಮಾರ್, ಬೇವಿನಹಳ್ಳಪ್ಪ, ರಾಘವೇಂದ್ರ, ವಿಷ್ಣು, ನಾಗರಾಜ್, ಗನ್ನಾಯಕನಹಳ್ಳಿ ರಾಜಣ್ಣ ಅವರು ತಹಶೀಲ್ದಾರ್ ರಾಜೇಶ್ ಕುಮಾರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಘಟನೆಯ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ಸಂಘಟನೆಯ ಮುಖಂಡರಿಗೆ ತಹಶೀಲ್ದಾರ್‌ ಭರವಸೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.