ADVERTISEMENT

ನಿರೀಕ್ಷಣಾ ಜಾಮೀನು ಕೋರಿದ ಮುರುಘಾ ಶರಣರ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

ತಕರಾರು ಸಲ್ಲಿಕೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 7:17 IST
Last Updated 1 ಸೆಪ್ಟೆಂಬರ್ 2022, 7:17 IST
ಮುರುಘಾ ಶರಣರು
ಮುರುಘಾ ಶರಣರು    

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಗುರಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಅವಕಾಶ ಕಲ್ಪಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆಯನ್ನು ಸೆ.2 ಕ್ಕೆ ಮುಂದೂಡಿದರು.

ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶ್ರೀ ಪರವಾಗಿ ವಕೀಲ ಕೆ.ಎನ್.ವಿಶ್ವನಾಥಯ್ಯ ಅವರು ಆ.29ರಂದು ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಅರ್ಜಿ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡರು.

ಬೆಳಿಗ್ಗೆ 11ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿಯನ್ನು ನ್ಯಾಯಾಧೀಶರು ಕೈಗೆತ್ತಿಕೊಂಡರು. ಸಂತ್ರಸ್ತ ಬಾಲಕಿಯರನ್ನು ಕೋರ್ಟ್ ಗೆ ಹಾಜರುಪಡಿಸಲಾಯಿತು. ಇತರ ಪ್ರಕರಣದಲ್ಲಿದ್ದ ವಕೀಲರನ್ನು ಹೊರ ಕಳುಹಿಸಿದ ನ್ಯಾಯಾಧೀಶರು, ಪ್ರಕರಣಕ್ಕೆ ಸಂಬಂಧಿಸಿದವರನ್ನು ಮಾತ್ರ ಉಳಿಸಿಕೊಂಡರು. ಬೆಳಿಗ್ಗೆ 11.40 ಸರಿಯಾಗಿ ವಿಚಾರಣೆ ಆರಂಭವಾಯಿತು.

ADVERTISEMENT

ಸಂತ್ರಸ್ತ ಬಾಲಕಿಯರ ಪರವಾಗಿ ಹೈಕೋರ್ಟ್ ವಕೀಲ ಶ್ರೀನಿವಾಸ್ ಹಾಗೂ ಕಾನೂನು ಸೇವಾ ಪ್ರಾಧಿಕಾರದ ವಕೀಲರು ಹಾಜರಾದರು. ಸಂತ್ರಸ್ತ ಬಾಲಕಿಯರು ಹಾಗೂ ಅವರ ತಂದೆಯ ಅಭಿಪ್ರಾಯ ಪರಿಗಣಿಸಿ ಶ್ರೀನಿವಾಸ್ ಅವರ ಅರ್ಜಿಯನ್ನು ಪರಿಗಣಿಸಿತು. ತಕರಾರು ಅಲ್ಲಿಕೆಗೆ ಒಂದು ದಿನ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.