ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ನಡೆಯುತ್ತಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಭಾವಚಿತ್ರವನ್ನು ಪ್ರದರ್ಶನ ಮಾಡಲಾಗಿದೆ.
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರ ಡಿ.ಜೆ ಮುಂಭಾಗದಲ್ಲಿಯೇ ಗೋಡ್ಸೆ ಚಿತ್ರ ಹಿಡಿದು ಕೆಲವರು ಕುಣಿದರು. ಸಾವರ್ಕರ್ ಹಾಗೂ ಬಜರಂಗದಳದ ಕಾರ್ಯಕರ್ತ ಶರತ್ ಮಡಿವಾಳ್ ಭಾವಚಿತ್ರವನ್ನು ಪ್ರದರ್ಶಿಸಲಾಯಿತು.
ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಿದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಆರಂಭವಾಗಿದೆ. ಚಳ್ಳಕೆರೆ ಗೇಟ್ ಸಮೀಪದ ಜೈನಧಾಮದಿಂದ ಹೊರಟ ಮೆರವಣಿಗೆ ಬಿ.ಡಿ.ರಸ್ತೆ, ಮದಕರಿ ನಾಯಕ ವೃತ್ತ, ಗಾಂಧಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಕನಕ ವೃತ್ತದ ಮೂಲಕ ಚಂದ್ರವಳ್ಳಿ ಸಮೀಪದ ಬಾವಿಯಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತದೆ.
ಮೆರವಣಿಗೆಗೆ ಸಾವಿರಾರು ಜನರು ಸೇರಿದ್ದಾರೆ. ಮೂರು ಡಿ.ಜೆ.ಗಳಿಗೆ ಅನುಮತಿ ನೀಡಲಾಗಿದೆ. ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಪೊಲೀಸರು ಡಿ.ಜೆ.ಗೆ ಅವಕಾಶ ನಿರಾಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.