ಚಿತ್ರದುರ್ಗ: ‘ಡಿ. 14ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ 44,917 ಪ್ರಕರಣಗಳ ಪೈಕಿ 3,939 ಪ್ರಕರಣಗಳ ಇತ್ಯರ್ಥಕ್ಕೆ ಗುರಿ ನಿಗದಿಪಡಿಸಿಕೊಳ್ಳಲಾಗಿದೆ. ಈಗಾಗಲೇ 38 ಪಕ್ರರಣಗಳನ್ನು ಇತ್ಯರ್ಥ ಪಡಿಸಲಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ ಹೇಳಿದರು.
‘ಕಳೆದ ಸೆ. 14ರಂದು ನಡೆದ ಲೋಕ ಅದಾಲತ್‌ನಲ್ಲಿ ಬಾಕಿ ಇದ್ದ 45,558 ಪ್ರಕರಣಗಳ ಪೈಕಿ 4,146 ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. ಈ ಮೂಲಕ ಶೇ 10 ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ನ್ಯಾಯಾಲಯದ ಮೇಲಿನ ಹೊರೆಯನ್ನು ತಗ್ಗಿಸಲಾಗಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇಷ್ಟರ ನಡುವೆಯೂ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು ರಾಜಿ ಆಗಬಹುದಾದ 321, ಚೆಕ್ ಅಮಾನ್ಯದ 4,775, ಬ್ಯಾಂಕ್ ವಸೂಲಾತಿ 1,558, ಖಾಸಗಿ ಸಾಲ ವಸೂಲಾತಿ 688, ಅಪಘಾತದ 2,561, ಆಸ್ತಿ ಪಾಲುಗಾರಿಕೆಯ 3,809 ಹಾಗೂ ಜನನ ಮತ್ತು ಮರಣ ನೋಂದಣಿಗೆ ಸಂಬಂಧಿಸಿದ 1,559 ಪ್ರಕರಣಗಳು ಜಿಲ್ಲೆಯಾದ್ಯಂತ ವಿವಿಧ ಹಂತದ ನ್ಯಾಯಾಲಯಗಳಲ್ಲಿವೆ’ ಎಂದರು.
‘ಸಾರ್ವಜನಿಕರು ಲೋಕ ಅದಾಲತ್ ಕುರಿತು ಹೆಚ್ಚಿನ ಪ್ರಶ್ನೆ ಮತ್ತು ಮಾಹಿತಿಗಾಗಿ ಬೇಕಾದಲ್ಲಿ ಇ-ಮೇಲ್ dlsachitradurga2@gmail.com ಸಂಪರ್ಕಿಸಬಹುದು. ಸದಸ್ಯ ಕಾರ್ಯದರ್ಶಿಯವರ ಕಚೇರಿ ಮೊ; 9141193935, ದೂ; 08194- 222322 ಕ್ಕೆ ಸಹ ಸಂಪರ್ಕಿಸಬಹುದು’ ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.