ಮೊಳಕಾಲ್ಮುರು: ರಕ್ತದಾನ ಮಾಡುವ ಕುರಿತು ಇರುವ ಮೂಢನಂಬಿಕೆಯಿಂದ ಹೊರಬಂದು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಅಗತ್ಯ ಇರುವವರಿಗೆ ರಕ್ತದಾನ ಮಾಡಬೇಕು ಎಂದು ರಾಂಪುರದ ಮುದುಕೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ವೀರಭದ್ರಯ್ಯ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ರಾಂಪುರದ ಎಸ್‌ಜಿಎಂ ಪ್ರಥಮದರ್ಜೆ ಕಾಲೇಜಿನಲ್ಲಿ ಏಡ್ಸ್ ನಿಯಂತ್ರಣ ಜಿಲ್ಲಾ ಘಟಕ, ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸಂಯುಕ್ತವಾಗಿ ಗುರುವಾರ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಏಡ್ಸ್ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ 6 ತಿಂಗಳಿಗೊಮ್ಮೆ ಪ್ರತಿ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು ಎಂಬುದು ವೈದ್ಯಕೀಯವಾಗಿ ಸಾಬೀತಾಗಿದೆ. ರಕ್ತದಾನ ಮಾಡುವುದರಿಂದ ಆರೋಗ್ಯ ಉತ್ತಮವಾಗಿರಲಿದೆ. ಈ ನಿಟ್ಟಿನಲ್ಲಿ ಯುವಕರು ಹೆಚ್ಚು ಗಮನಹರಿಸಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಹೇಳಿದರು.
ವೈದ್ಯಾಧಿಕಾರಿರೋಹಿತ್ ಕುಮಾರ್, ಐಸಿಟಿಸಿ ಆಪ್ತ ಸಮಾಲೋಚಕರಾದ ಕೊಟ್ರೇಶ್, ಕಾಂತರಾಜ್, ರಕ್ತನಿಧಿ ಕೇಂದ್ರದ ತಾಂತ್ರಿಕ ಸಿಬ್ಬಂದಿಯಾದ ಸಂದೀಪ್, ಸುರೇಶ್, ಮುರಳಿ, ಆಶಾ ಹಾಗೂ ಉಪನ್ಯಾಸಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.