ADVERTISEMENT

ವಾಲ್ಮೀಕಿ ರಾಮಾಯಣದಲ್ಲಿ ಬದುಕಿನ ಮೌಲ್ಯಗಳಿವೆ

ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 16:18 IST
Last Updated 21 ನವೆಂಬರ್ 2024, 16:18 IST
ಚಳ್ಳಕೆರೆ ತಾಲ್ಲೂಕಿನ ಮೈಲನಹಳ್ಳಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಉದ್ಘಾಟಿಸಿದರು
ಚಳ್ಳಕೆರೆ ತಾಲ್ಲೂಕಿನ ಮೈಲನಹಳ್ಳಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಉದ್ಘಾಟಿಸಿದರು    

ಚಳ್ಳಕೆರೆ: ವಾಲ್ಮೀಕಿ ರಚಿಸಿರುವ ರಾಮಾಯಣ ಮಹಾಕಾವ್ಯದಲ್ಲಿ ಸಾಮಾಜಿಕ ಬದುಕಿನ ಮೌಲ್ಯಗಳಿವೆ ಎಂದು ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮೈಲನಹಳ್ಳಿ ಗ್ರಾಮದಲ್ಲಿ ಗುರುವಾರ ವಾಲ್ಮೀಕಿ ಸಮುದಾಯ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಮಾಯಣದಲ್ಲಿ ಚಿತ್ರಿತವಾಗಿರುವ ಪ್ರತಿ ಪಾತ್ರಗಳನ್ನು ಮಕ್ಕಳಿಗೆ ಪರಿಚಯ ಮಾಡಿಸಿಕೊಡಬೇಕು. ಅವರನ್ನು ಸಮಾಜದ ಉತ್ತಮ ಪ್ರಜೆಗಳಾಗಿ ರೂಪಿಸಬೇಕು ಎಂದು ಹೇಳಿದರು.

ADVERTISEMENT

ಆದಿಕವಿ ವಾಲ್ಮೀಕಿ ಮಹರ್ಷಿ ಭಾರತೀಯ ಸಾಹಿತ್ಯ-ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ. ಕಾವ್ಯದಲ್ಲಿ ಮನಃಪರಿವರ್ತನೆಯ ಅಂಶಗಳಿವೆ. ಪ್ರತಿಯೊಬ್ಬರೂ ರಾಮಾಯಣ ಗ್ರಂಥವನ್ನು ಓದಬೇಕು ಎಂದು ರೈತ ಮುಖಂಡ ಕೆ.ಪಿ.ಭೂತಯ್ಯ ಹೇಳಿದರು.

ಕಾಂಗ್ರೆಸ್ ಮುಖಂಡ ಕಸವಿಗೊಂಡನಹಳ್ಳಿ ಎನ್.ನಾಗಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ್, ಗ್ರಾಮಾಭಿವೃದ್ಧಿ ಅಧಿಕಾರಿ ನಾಗರಾಜ ಮಾತನಾಡಿದರು.

ವಾಲ್ಮೀಕಿ ಭಾವಚಿತ್ರ ಮತ್ತು ಪುತ್ಥಳಿಗೆ ವಿಶೇಷ ಪೂಜೆ ಹಾಗೂ ಪುಷ್ಪನಮನ ಸಲ್ಲಿಸಲಾಯಿತು. ವಾಲ್ಮೀಕಿ ಯುವಕ ಸಂಘದ ಅಧ್ಯಕ್ಷ ರಾಜಣ್ಣ, ತಿಪ್ಪೇಸ್ವಾಮಿ, ಮಂಜುನಾಥ್, ಸುರೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.