ADVERTISEMENT

ಬಾಲ್ಯವಿವಾಹದಿಂದ ಸಾಮಾಜಿಕ ಅಭಿವೃದ್ಧಿ ಕುಂಠಿತ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2024, 16:08 IST
Last Updated 8 ನವೆಂಬರ್ 2024, 16:08 IST
ಮೊಳಕಾಲ್ಮುರಿನ ಆದರ್ಶ ವಿದ್ಯಾಲಯದಲ್ಲಿ ಬುಧವಾರ ಬಾಲ್ಯ ವಿವಾಹ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ನಡೆಯಿತು
ಮೊಳಕಾಲ್ಮುರಿನ ಆದರ್ಶ ವಿದ್ಯಾಲಯದಲ್ಲಿ ಬುಧವಾರ ಬಾಲ್ಯ ವಿವಾಹ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ನಡೆಯಿತು   

ಮೊಳಕಾಲ್ಮುರು: ಬಾಲ್ಯವಿವಾಹ ಮಾಡುವುದರಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗುವ ಜತೆಗೆ ಹಲವು ಅನಾರೋಗ್ಯ ಸಮಸ್ಯೆಗಳು ಕಾಡುವ ಮೂಲಕ ದೇಶದ ಸಾಮಾಜಿಕ ವ್ಯವಸ್ಥೆ ಕುಂಠಿತಕ್ಕೆ ಕಾರಣವಾಗುತ್ತದೆ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ರಾಮಾಂಜನೇಯ ಹೇಳಿದರು.

ಇಲ್ಲಿನ ಆದರ್ಶ ವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆ ಕುರಿತ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಬಾಲ್ಯವಿವಾಹಕ್ಕೆ ಪ್ರೇರಣೆ ನೀಡುವವರು, ಪಾಲಕರು ಮತ್ತು ಮದುವೆಯಲ್ಲಿ ಭಾಗವಹಿಸಿದ ಎಲ್ಲರನ್ನೂ ಶಿಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಬಾಲ್ಯವಿವಾಹದಿಂದ ಅಂಗವಿಕಲ ಹಾಗೂ ಅಪೌಷ್ಟಿಕತೆಯಿಂದ ಬಳಲುವ ಮಗು ಜನಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಪಾಲಕರು ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದಲ್ಲಿ ಮಕ್ಕಳ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ಸಲಹೆ ನೀಡಿದರು.

ADVERTISEMENT

ಮುಖ್ಯಶಿಕ್ಷಕ ಎಂ.ಮಲ್ಲಿಕಾರ್ಜುನ್‌ ಮಾತನಾಡಿದರು. ಶಿಕ್ಷಕರಾದ ಎಂ.ರೂಪಾ, ಡಿ.ವಿಜಯಲಕ್ಷ್ಮಿ, ಡಿ.ಎನ್.‌ನಂದೀಶ್‌, ಎಂ.ಕುಮಾರಸ್ವಾಮಿ, ಮುಜಾಮಿಲ್‌, ಸಿ.ದೊಡ್ಡೇಶ್‌ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.