ADVERTISEMENT

ಮಠದಲ್ಲಿ ರಾಜಕೀಯ ಭಾಷಣ: ಬಿ.ವೈ.ರಾಘವೇಂದ್ರ ವಿರುದ್ಧ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2024, 5:54 IST
Last Updated 24 ಮಾರ್ಚ್ 2024, 5:54 IST
ಬಿ.ವೈ.ರಾಘವೇಂದ್ರ
ಬಿ.ವೈ.ರಾಘವೇಂದ್ರ    

ಚಿತ್ರದುರ್ಗ: ಇಲ್ಲಿನ ಭೋವಿ ಗುರುಪೀಠವನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡು ಚುನಾವಣಾ ಭಾಷಣ ಮಾಡಿದ ಆರೋಪದ ಮೇರೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಘವೇಂದ್ರ ಅವರು ಶನಿವಾರ ಮಠಕ್ಕೆ ಭೇಟಿ ನೀಡಿ ಮಠಾಧೀಶರೊಂದಿಗೆ ಸಭೆ ಮಾಡಿದ್ದರು. ಅನುಮತಿ ಪಡೆಯದೇ ಸಭೆ ನಡೆಸಿ ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ ಹಾಗೂ ಧಾರ್ಮಿಕ ಸ್ಥಳವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

‘ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣೆ ಮೂಲಕ ಪಕ್ಷವೊಂದನ್ನು ಅಧಿಕಾರಕ್ಕೆ ತರುವ ಉದ್ದೇಶವಿಲ್ಲ. ಅಂತಹ ಚುನಾವಣೆ ಕೂಡ ಇದಲ್ಲ. ರಾಷ್ಟ್ರ ಪರ ಹಾಗೂ ರಾಷ್ಟ್ರ ವಿರೋಧಿ ಚಿಂತನೆ ಮಾಡುತ್ತಿರುವ ಶಕ್ತಿಗಳ ವಿರುದ್ಧ ನಡೆಯುತ್ತಿರುವ ಧರ್ಮ ಯುದ್ಧ’ ಎಂದು ಭಾಷಣ ಮಾಡಿದ್ದರು. ಸಭೆಯ ವಿಡಿಯೊ ಆಧರಿಸಿ ಚುನಾವಣಾ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.