ADVERTISEMENT

ರಾಂಪುರ: ಶಾಸಕ ಎನ್‌ವೈಜಿ ಮನೆ ಎದುರು ಧರಣಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 16:11 IST
Last Updated 25 ಅಕ್ಟೋಬರ್ 2024, 16:11 IST
ಮೊಳಕಾಲ್ಮುರು ತಾಲ್ಲೂಕಿನ ರಾಂಪುರದ ಶಾಸಕ ಎನ್.ವೈ. ಗೋಪಾಲಕೃಷ್ಣ ನಿವಾಸ ಎದುರು ಶುಕ್ರವಾರ ಮಾದಿಗ ಮಹಾಸಭಾ ಕಾರ್ಯಕರ್ತರು ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಧರಣಿ ನಡೆಸಿ ಮನವಿ ಸಲ್ಲಿಸಿದರು.
ಮೊಳಕಾಲ್ಮುರು ತಾಲ್ಲೂಕಿನ ರಾಂಪುರದ ಶಾಸಕ ಎನ್.ವೈ. ಗೋಪಾಲಕೃಷ್ಣ ನಿವಾಸ ಎದುರು ಶುಕ್ರವಾರ ಮಾದಿಗ ಮಹಾಸಭಾ ಕಾರ್ಯಕರ್ತರು ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಧರಣಿ ನಡೆಸಿ ಮನವಿ ಸಲ್ಲಿಸಿದರು.   

ಮೊಳಕಾಲ್ಮುರು: ತಾಲ್ಲೂಕಿನ ರಾಂಪುರದ ಶಾಸಕ ಎನ್.ವೈ.ಗೋಪಾಲಕೃಷ್ಣ ನಿವಾಸದ ಎದುರು ಶುಕ್ರವಾರ ಮಾದಿಗ ಮಹಾಸಭಾ ಕಾರ್ಯಕರ್ತರು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಧರಣಿ ನಡೆಸಿದರು.

‘ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಮ್ಮ ಜೀವನ ಮಟ್ಟ ಸುಧಾರಣೆ ನಿಟ್ಟಿನಲ್ಲಿ ಒಳಮೀಸಲಾತಿ ಮೂಲಕ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸೌಲಭ್ಯ ಕೊಡಬೇಕು ಎಂದು ಆಗ್ರಹಿಸಿ 30 ವರ್ಷಗಳಿಂದ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದೇವೆ. ಆದರೆ ಸರ್ಕಾರಗಳು ಬರೀ ಭರವಸೆ ನೀಡಿ ಕೈ ತೊಳೆದುಕೊಂಡಿವೆ’ ಎಂದು ದೂರಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಎನ್.ವೈ.ಗೋಪಾಲಕೃಷ್ಣ, ‘ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ನಿಮ್ಮ ನ್ಯಾಯಯುತ ಬೇಡಿಕೆಗೆ ಸ್ಪಂದಿಸಲಾಗುವುದು’ ಎಂದು ಹೇಳಿದರು.

ADVERTISEMENT

ಸಮುದಾಯದ ಮುಖಂಡರಾದ ಜಿ.ಪ್ರಕಾಶ್‌, ಕೊಂಡಾಪುರ ಪರಮೇಶ್ವರಪ್ಪ, ದಡಗೂರು ಮಂಜುನಾಥ್‌, ಉಮೇಶ್‌, ಆನಂದ್‌ ಐಹೊಳೆ, ಪರಮೇಶ್‌, ತಿಪ್ಪೇಸ್ವಾಮಿ, ನಾಗರಾಜ್‌, ಉಮಾಶಂಕರ್‌, ಶಿವಶಂಕರ್‌, ಗಂಗಾಧರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.