ADVERTISEMENT

ಸಾವಿತ್ರಿ ಬಾಯಿ ಫುಲೆ ಶ್ರಮ ಅನನ್ಯ: ನಿರ್ಮಲಾದೇವಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2024, 7:32 IST
Last Updated 4 ಜನವರಿ 2024, 7:32 IST
ಮೊಳಕಾಲ್ಮುರಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಭೀಮ ಕೋರೆಂಗಾವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು
ಮೊಳಕಾಲ್ಮುರಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಭೀಮ ಕೋರೆಂಗಾವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು    

ಮೊಳಕಾಲ್ಮುರು: ‘ಕೆಲ ವರ್ಗಕ್ಕೆ ಮಾತ್ರ ಸೀಮಿತವಾಗಿದ್ದ ಶಿಕ್ಷಣವನ್ನು ಸರ್ವರಿಗೂ ಸಿಗುವಂತೆ ಮಾಡಿದ ಕೀರ್ತಿ ಸಾವಿತ್ರಿಬಾಯಿ ಫುಲೆ ಅವರಿಗೆ ಸಲ್ಲುತ್ತದೆ. ಇದಕ್ಕಾಗಿ ಅವರು ಪಟ್ಟ ಶ್ರಮ ಸ್ಮರಣೀಯ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲಾದೇವಿ ಹೇಳಿದರು.

ಕನ್ನಡ ಭವನದಲ್ಲಿ ಬುಧವಾರ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ಸಾವಿತ್ರಿ ಬಾಯಿ ಫುಲೆ ಜಯಂತಿ ಹಾಗೂ ಭೀಮ ಕೋರೆಂಗಾವ್ ವಿಜಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆ ಆರಂಭಿಸುವ ಮೂಲಕ ಮಹಿಳಾ ಶಿಕ್ಷಣ ಪದ್ಧತಿಗೆ ಸಾವಿತ್ರಿಬಾಯಿ ಫುಲೆ ಮುನ್ನುಡಿ ಬರೆದರು. ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತ ಮಾಡಿದ ಕಾಲದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಪರಿಣಾಮ ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿ ಸಾಧನೆ ಮಾಡಲು ಕಾರಣವಾಗಿದೆ’ ಎಂದು ಹೇಳಿದರು.

ADVERTISEMENT

ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಡಿ.ಒ.ಕರಿಬಸಪ್ಪ ಮಾತನಾಡಿ, ‘ತೊಟ್ಟಿಲು ತೂಗುವ ಕೈಗಳು ದೇಶವನ್ನು ಮುನ್ನಡೆಸುತ್ತವೆ ಎಂಬ ಘೋಷಣೆಯೊಂದಿಗೆ ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಿಕ್ಷಣ ವ್ಯವಸ್ಥೆ ಜಾರಿಗಾಗಿ ಸಾಕಷ್ಟು ಹೋರಾಟ ಮಾಡಿದರು. ಪ್ರತಿವರ್ಷ ಫುಲೆ ಅವರ ಜನ್ಮದಿನವನ್ನು ‘ಶಿಕ್ಷಕಿಯರ ದಿನ’ವನ್ನಾಗಿ ಆಚರಿಸಿದಲ್ಲಿ ಹೆಚ್ಚಿನ ಅರ್ಥ ಸಿಗಲಿದೆ’ ಎಂದು ಹೇಳಿದರು.

ಇದೇ ವೇಳೆ ತಾಲ್ಲೂಕಿನ ವಿವಿಧ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಮಾಜ ಕಲ್ಯಾಣಾಧಿಕಾರಿ ಮಾಲತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಈರಣ್ಣ, ಚಲನಚಿತ್ರ ನಿರ್ದೇಶಕ ಜಿ.ಶ್ರೀನಿವಾಸಮೂರ್ತಿ, ಸಿಡಿಪಿಒ ನವೀನ್, ವಕೀಲ ರಾಜಶೇಖರ ನಾಯಕ, ನೇರ್ಲಹಳ್ಳಿ ಪರಮೇಶ್, ಕೆ.ಎಸ್. ಸಣ್ಣಯಲ್ಲಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.