ಶ್ರೀರಾಂಪುರ: ಗ್ರಾಮದ ವಿವಿಧ ಬಡಾವಣೆಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕಡಿವಾಣ ಹಾಕುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಸ್ ನಿಲ್ದಾಣ, ಮುಖ್ಯ ರಸ್ತೆ ಸೇರಿದಂತೆ ವಿವಿಧ ರಸ್ತೆಗಳು ಹಾಗೂ ಬಡಾವಣೆಗಳಲ್ಲಿ ಹತ್ತಾರು ನಾಯಿಗಳು ಗುಂಪು ಗುಂಪಾಗಿ ಸುತ್ತಾಡುತ್ತಿವೆ. ಮಕ್ಕಳನ್ನು ಒಂಟಿಯಾಗಿ ಹೊರಗಡೆ ಆಟವಾಡಲು, ಶಾಲೆಗೆ ಕಳುಹಿಸಲು ಪಾಲಕರು ಭಯಪಡುತ್ತಿದ್ದಾರೆ. ದ್ವಿಚಕ್ರ ವಾಹನದಲ್ಲಿ ಹೋಗುವ ಸವಾರರನ್ನು ನಾಯಿಗಳು ಬೆನ್ನಟ್ಟುತ್ತಿವೆ. ವಾಹನ ಸವಾರರು ಬಿದ್ದು ಕೈಕಾಲುಗಳಿಗೆ ಪೆಟ್ಟು ಮಾಡಿಕೊಂಡ ನಿದರ್ಶನಗಳೂ ಇವೆ.
ಹೊಸ ಬಸ್ ನಿಲ್ದಾಣದಲ್ಲಿ ಬೀದಿ ನಾಯಿಗಳು ಬೀಡು ಬಿಟ್ಟಿವೆ. ‘ಇತ್ತೀಚೆಗೆ ಮೊಳಕಾಲ್ಮೂರಿನ ರಾಂಪುರದಲ್ಲಿ ಬೀದಿ ನಾಯಿಗಳ ದಾಳಿಗೆ ಬಾಲಕ ಮೃತಪಟ್ಟಿದ್ದ. ಇಂಥ ದುರ್ಘಟನೆ ಮರುಕಳಿಸದಂತೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.