ADVERTISEMENT

ಹಾಲು, ಬೆಣ್ಣೆ ಮಾರುಕಟ್ಟೆ ವಿಸ್ತರಣೆಗೆ ಚಿಂತನೆ

ಶಿಮುಲ್ ಅಧ್ಯಕ್ಷ ವಿದ್ಯಾಧರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2024, 15:23 IST
Last Updated 16 ಸೆಪ್ಟೆಂಬರ್ 2024, 15:23 IST
ಚಿತ್ರದುರ್ಗದಲ್ಲಿ ಸೋಮವಾರ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಪ್ರಾದೇಶಿಕ ಸಭೆಯನ್ನು ಶಿಮುಲ್ ಅಧ್ಯಕ್ಷ ವಿದ್ಯಾಧರ್‌ ಉದ್ಘಾಟಿಸಿದರು
ಚಿತ್ರದುರ್ಗದಲ್ಲಿ ಸೋಮವಾರ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಪ್ರಾದೇಶಿಕ ಸಭೆಯನ್ನು ಶಿಮುಲ್ ಅಧ್ಯಕ್ಷ ವಿದ್ಯಾಧರ್‌ ಉದ್ಘಾಟಿಸಿದರು   

ಚಿತ್ರದುರ್ಗ: ಮುಂದಿನ ದಿನಗಳಲ್ಲಿ ಹಾಲು ಹಾಗೂ ಬೆಣ್ಣೆಗೆ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸಲಾಗುತ್ತದೆ ಎಂದು ಶಿಮುಲ್ ಅಧ್ಯಕ್ಷ ವಿದ್ಯಾಧರ್ ತಿಳಿಸಿದರು.

ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್‌) ದಿಂದ ಆಯೋಜಿಸಿದ್ದ ಪ್ರಾದೇಶಿಕ ಸಭೆ ಉದ್ಘಾಟಿಸಿ ಮಾತನಾಡಿದರು.

‘ಹಾಲಿನ ಪುಡಿ ಹಾಗೂ ಬೆಣ್ಣೆ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಿದೆ. ಒಂದು ಕೆಜಿ ಹಾಲಿನ ಪುಡಿ ಸಿದ್ದಪಡಿಸಲು 11 ಲೀಟರ್‌ ಹಾಲು ಬೇಕಾಗುತ್ತದೆ. ₹ 33ಗೆ ಒಂದು ಲೀ.ಹಾಲು ಖರೀದಿಸಿ ಹಾಲಿನ ಪುಡಿ ಸಿದ್ಧಗೊಳಿಸಿ ಮಾರಾಟ ಮಾಡಿದರೆ ₹ 180 ನಷ್ಟವಾಗುತ್ತಿದೆ. ಹಾಲಿನ ಬೇಡಿಕೆ ನೋಡಿಕೊಂಡು ದರ ಏರಿಕೆ ಮಾಡಲಾಗುತ್ತದೆ’ ಎಂದರು.

ADVERTISEMENT

‘ರೈತರಿಗೆ ಅನುಕೂಲವಾಗಲು ಜಿಲ್ಲೆಯಲ್ಲಿ ಹೊಸ ಹಾಲಿನ ಸೊಸೈಟಿಗಳು ಆರಂಭವಾಗಬೇಕು. ಜಾನುವಾರುಗಳಿಗೆ ವಿಮೆ ಮಾಡಿಸಿದರೆ ಆಕಸ್ಮಿಕವಾಗಿ ರಾಸುಗಳು ಮೃತಪಟ್ಟಾಗ ಪರಿಹಾರ ದೊರಕುತ್ತದೆ. ರೈತರು ಗುಣಮಟ್ಟದ ಹಾಲನ್ನು ಸಹಕಾರ ಸಂಘಕ್ಕೆ ಕೊಡಬೇಕು’ ಎಂದು ಒಕ್ಕೂಟದ ನಿರ್ದೇಶಕ ಜಿ.ಬಿ. ಶೇಖರ್‌ ತಿಳಿಸಿದರು.

ನಿರ್ದೇಶಕರಾದ ರೇವಣಸಿದ್ದಪ್ಪ, ಸಂಜೀವಮೂರ್ತಿ, ರವಿಕುಮಾರ್‌, ಶೇಖರ್‌, ಶಿವಮೊಗ್ಗ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಮುರಳಿಧರ್‌, ಉಪ ವ್ಯವಸ್ಥಾಪಕ ಕುಮಾರಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.