ಚಿತ್ರದುರ್ಗ: ಕರ್ನಾಟಕ ರಾಜ್ಯ ಹಜರತ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯು ಟಿಪ್ಪು ಸುಲ್ತಾನ್ ಅವರ 270ನೇ ಜಯಂತ್ಯುತ್ಸವ ಹಾಗೂ 64ನೇ ಕನ್ನಡ ರಾಜ್ಯೋತ್ಸವವನ್ನು ತರಾಸು ರಂಗಮಂದಿರದಲ್ಲಿ ನ. 30ರಂದು ಬೆಳಿಗ್ಗೆ 10ಕ್ಕೆ ಹಮ್ಮಿಕೊಂಡಿದೆ.
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜನಪರ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಉದ್ಘಾಟನೆ ಮಾಡಲಿದ್ದು, ಟಿಪ್ಪು ಸುಲ್ತಾನ್ ಕುರಿತು ವಿಶೇಷ ಭಾಷಣ ಮಾಡಲಿದ್ದಾರೆ. ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ಅಧ್ಯಕ್ಷ ಟಿಪ್ಪು ಖಾಸಿಂ ಅಲಿ ಅಧ್ಯಕ್ಷತೆ ವಹಿಸುವರು. ವೇದಿಕೆಯ ಮುಖಂಡರಾದ ಎಚ್.ಷಬ್ಬೀರ್ ಬಾಷಾ, ಸಿರಾಜುದ್ದೀನ್ ಸುಲ್ತಾನ್ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ನಗರಸಭೆಯ ಮಾಜಿ ಉಪಾಧ್ಯಕ್ಷ ಎನ್.ಬಿ.ಟಿ.ಜಮೀರ್ ಹಾಗೂ ವಕೀಲ ಸಾದಿಕ್ ಉಲ್ಲಾ ಅವರು ಟಿಪ್ಪು ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಾಜಿ ಸಚಿವ ಎಚ್.ಆಂಜನೇಯ, ಶಾಸಕ ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್, ಮಾಜಿ ಸಂಸದ ಎನ್.ಚಂದ್ರಪ್ಪ ಪಾಲ್ಗೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.