ADVERTISEMENT

ಹಿರಿಯೂರು: ಆಗಸ್ಟ್ 6ರಂದು ಸುಧಾರಿತ ಬೇಸಾಯ ಕುರಿತು ತರಬೇತಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 13:58 IST
Last Updated 3 ಆಗಸ್ಟ್ 2024, 13:58 IST

ಹಿರಿಯೂರು: ತಾಲ್ಲೂಕಿನ ಬಬ್ಬೂರು ಫಾರಂ ಕೃಷಿ ತರಬೇತಿ ಕೇಂದ್ರದಲ್ಲಿ ಆಗಸ್ಟ್ 6ರಂದು ಬೆಳಿಗ್ಗೆ 10ಕ್ಕೆ ಸುಧಾರಿತ ಬೇಸಾಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಈರುಳ್ಳಿ ಟೊಮ್ಯಾಟೊ, ಮೆಣಸಿನಕಾಯಿ ಮತ್ತು ಬದನೆಕಾಯಿ ಬೆಳೆಗಳಲ್ಲಿ ಅನುಸರಿಸಬೇಕಾದ ಬೇಸಾಯ ಕ್ರಮಗಳ ಬಗ್ಗೆ ಹಿರಿಯೂರಿನ ತೋಟಗಾರಿಕೆ ಮಹಾವಿದ್ಯಾಲಯದ ತೋಟಗಾರಿಕೆ ತಜ್ಞರಾದ  ಪ್ರಕಾಶ್ ಕೆರೂರ್ ಮತ್ತು ಶ್ರುತಿ, ಬೆಳೆಗಳಲ್ಲಿ ಕಂಡು ಬರುವ ಪ್ರಮುಖ ಕೀಟ ಮತ್ತು ರೋಗಗಳ ನಿರ್ವಹಣೆ ಬಗ್ಗೆ ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ರುದ್ರಮುನಿ ವಿಷಯ ಮಂಡಿಸಲಿದ್ದಾರೆ.

50 ರೈತರಿಗೆ ಪಾಲ್ಗೊಳ್ಳಲು ಅವಕಾಶ ಇದೆ. ರೈತರು ತಮ್ಮ ಹೆಸರನ್ನು ಆರ್. ರಜನೀಕಾಂತ್, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (9845249832) ಅಥವಾ ಎಂ.ಜೆ. ಪವಿತ್ರ (9535412286) ಅವರಲ್ಲಿ ಹೆಸರು ನೋಂದಾಯಿಸಬಹುದು. ರೈತರು ಎಫ್‌ಐಡಿ ಕಾರ್ಡ್ ಅಥವಾ ಚುನಾವಣಾ ಗುರುತಿನ ಚೀಟಿ ತರಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.