ADVERTISEMENT

ಅಪಘಾತ | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 31 ಜನವರಿ 2024, 4:37 IST
Last Updated 31 ಜನವರಿ 2024, 4:37 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಚಿತ್ರದುರ್ಗ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಳ್ಳಕೆರೆ ತಾಲ್ಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಸಮೀಪ ಬುಧವಾರ ನಸುಕಿನಲ್ಲಿ ನಡೆದಿದೆ.

ಚಳ್ಳಕೆರೆ ತಾಲ್ಲೂಕಿನ ಚಿತ್ರಯ್ಯನಹಟ್ಟಿ ನಿವಾಸಿ ವೆಂಕಟೇಶ (55) ಮತ್ತು ಸೂಜಿಮಲ್ಲೇಶ ನಗರದ ವೆಂಕಟೇಶ (56) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಕಿಶೋರ್ ಎಂಬುವರನ್ನು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಬುಧವಾರ ನಸುಕಿನಲ್ಲಿ ಕಾರು ಚಿತ್ರದುರ್ಗದಿಂದ ಚಳ್ಳಕೆರೆ ಕಡೆಗೆ ಸಾಗುತ್ತಿತ್ತು. ಅತಿ ವೇಗದಲ್ಲಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.