ADVERTISEMENT

ಬಾಲ ಬಿಚ್ಚಿದರೆ ಗಡಿಪಾರು: ರೌಡಿಗಳಿಗೆ ಡಿವೈಎಸ್‌ಪಿ ಪಾಂಡುರಂಗಪ್ಪ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 13:14 IST
Last Updated 12 ಡಿಸೆಂಬರ್ 2019, 13:14 IST
ಚಿತ್ರದುರ್ಗದಲ್ಲಿ ಗುರುವಾರ ರೌಡಿಗಳಿಗೆ ಎಚ್ಚರಿಕೆ ನೀಡಲು ಕರೆದಿದ್ದ ಸಭೆಯಲ್ಲಿ ಡಿವೈಎಸ್‌ಪಿ ಪಾಂಡುರಂಗಪ್ಪ ಮಾತನಾಡಿದರು.
ಚಿತ್ರದುರ್ಗದಲ್ಲಿ ಗುರುವಾರ ರೌಡಿಗಳಿಗೆ ಎಚ್ಚರಿಕೆ ನೀಡಲು ಕರೆದಿದ್ದ ಸಭೆಯಲ್ಲಿ ಡಿವೈಎಸ್‌ಪಿ ಪಾಂಡುರಂಗಪ್ಪ ಮಾತನಾಡಿದರು.   

ಚಿತ್ರದುರ್ಗ: ‘ಚಿತ್ರದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಯಾವುದೇ ರೀತಿಯ ದುಷ್ಕೃತ್ಯಗಳಿಗೂ ಕೈ ಹಾಕಬಾರದು. ಒಂದು ವೇಳೆ ಅಹಿತಕರ ಘಟನೆ ನಡೆದರೆ, ಬಾಲ ಬಿಚ್ಚಿದರೆ ಗಡಿಪಾರು ಮಾಡಲಾಗುವುದು’ ಎಂದು ಡಿವೈಎಸ್‌ಪಿ ಪಾಂಡುರಂಗಪ್ಪ ರೌಡಿಗಳಿಗೆ ಎಚ್ಚರಿಕೆ ನೀಡಿದರು.

ರೌಡಿ ಶೀಟರ್‌ಗಳ ಮಾಹಿತಿ ಸಂಗ್ರಹಿಸಿ ಇಲ್ಲಿ ಗುರುವಾರ 120ಕ್ಕೂ ಹೆಚ್ಚು ರೌಡಿಗಳೊಂದಿಗೆ ಸಭೆ ನಡೆಸಿದ ಅವರು, ‘ಅಮಾಯಕರ ಬಳಿ ವಸೂಲಾತಿ ಮಾಡುವುದು, ಹಿಂದುಳಿದ ವರ್ಗದವರ ಮೇಲೆ ದೌರ್ಜನ್ಯಕ್ಕೆ ಮುಂದಾಗುವುದು ಸೇರಿ ಯಾವುದೇ ರೀತಿಯ ಕೃತ್ಯ ಎಸಗಿದಲ್ಲಿ ಮೊದಲು ರೌಡಿಗಳೇ ನೇರ ಹೊಣೆ ಹೊರಬೇಕಾಗುತ್ತದೆ’ ಎಂದು ಹೇಳಿದರು.

‘ಚಿಕ್ಕಪುಟ್ಟ ಗಲಭೆಗೆ ಪ್ರಚೋದನೆ ನೀಡಿದರೂ ಮುಲಾಜಿಲ್ಲದೇ ಬಂಧಿಸಲಾಗುವುದು. ಎರಡು ತಾಲ್ಲೂಕುಗಳಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು. ಅದಕ್ಕೆ ಧಕ್ಕೆ ಉಂಟಾದರೂ ನಿಮ್ಮನ್ನೇ ಮೊದಲು ವಿಚಾರಣೆ ನಡೆಸಿ, ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಎಚ್ಚರವಿರಲಿ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.