ADVERTISEMENT

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮಹಿಳೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2023, 6:49 IST
Last Updated 31 ಆಗಸ್ಟ್ 2023, 6:49 IST
   

ಚಿಕ್ಕಜಾಜೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಮೀಪದ ಹನುಮನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಗಣೇಶಪ್ಪ ಅವರ ಪತ್ನಿ ಪರಿಮಳ (30) ಆತ್ಮಹತ್ಯೆ ಮಾಡಿಕೊಂಡವರು.

ಬುಧವಾರ ಮುಂಜಾನೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ದಾವಣಗೆರೆ ರೈಲ್ವೆ ನಿಲ್ದಾಣದ ಇನ್‌ಸ್ಪೆಕ್ಟರ್‌ ಕೆ.ಟಿ. ಅಣ್ಣಯ್ಯ ಸ್ಥಳಕ್ಕೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.