ಬೀದರ್: ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಶಾಂತಿಯುತವಾಗಿ ಮುಗಿದಿದೆ. ಇದೀಗ ಮತ ಎಣಿಕೆಗೆ ಜಿಲ್ಲಾ ಆಡಳಿತ ಸಕಲ ಸಿದ್ಧತೆ ಆರಂಭಿಸಿದೆ.
ಮೇ 13 ರಂದು ಭೂಮರೆಡ್ಡಿ ಕಾಲೇಜಿನಲ್ಲಿ ಮತಗಳ ಎಣಿಕೆ ನಡೆಯಲಿದೆ. ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ.
ಚುನಾವಣಾ ವೀಕ್ಷಕರು. ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ ಗುರುವಾರ ಭೂಮರೆಡ್ಡಿ (ಬಿ.ವಿ.ಬಿ )ಕಾಲೇಜಿಗೆ ಭೇಟಿ ನೀಡಿ ಮತ ಎಣಿಕೆ ಕೇಂದ್ರದ ಪರಿಶೀಲನೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.