ADVERTISEMENT

ಎಸ್‌ಡಿಎಂ ಶಿಕ್ಷಣ ಸಂಸ್ಥೆಯಿಂದ ₹ 1.35 ಕೋಟಿ ವಿದ್ಯಾರ್ಥಿವೇತನ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 13:50 IST
Last Updated 17 ಜೂನ್ 2024, 13:50 IST
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರಕುಮಾರ್‌ ಅವರು ವಿದ್ಯಾರ್ಥಿವೇತನ ವಿತರಿಸಿದರು
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರಕುಮಾರ್‌ ಅವರು ವಿದ್ಯಾರ್ಥಿವೇತನ ವಿತರಿಸಿದರು   

ಉಜಿರೆ: ವಿದ್ಯಾರ್ಥಿಗಳು ಎಲ್ಲ ಅವಕಾಶ ಮತ್ತು ಸವಲತ್ತುಗಳನ್ನು ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರಕುಮಾರ್ ಹೇಳಿದರು.

ಉಜಿರೆಯ ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮೀಸಲಾದ ₹1.35 ಕೋಟಿ ವಿದ್ಯಾರ್ಥಿ ವೇತನ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ವ್ಯಕ್ತಿತ್ವವಿಕಸನ ಮಾಡಿಕೊಂಡು ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ಸಮಾಜಸೇವೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ADVERTISEMENT

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಪ್ರೊ.ವಿಶ್ವನಾಥ್ ಭಾಗವಹಿಸಿದ್ದರು.

ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಕುಮಾರ ಹೆಗ್ಡೆ ಸ್ವಾಗತಿಸಿದರು. ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಅಶೋಕ್ ಕುಮಾರ್ ವಂದಿಸಿದರು. ಪ್ರೊ.ಮಧು ಕೆ. ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.