ಮಂಗಳೂರು: ದುಬೈನಿಂದ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕ ಅಕ್ರಮ ಸಾಗಾಟಕ್ಕೆ ಯತ್ನಿಸಿದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಅಬೂಬಕರ್ ಸಿದ್ದೀಕ್ ಬಂಧಿತ ಎಂದು ತಿಳಿದುಬಂದಿದೆ.
ಈತ ದುಬೈನಿಂದ ಸ್ಪೈಸ್‌ಜೆಟ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದಿದ್ದಾನೆ. ತಪಾಸಣೆ ನಡೆಸುವ ವೇಳೆ 24 ಕ್ಯಾರೆಟ್‌ನ 634 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ₹32,96,800 ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಯು ಪೌಡರ್ ರೂಪದ ಚಿನ್ನವನ್ನು ದೇಹಕ್ಕೆ ಅಂಟಿಸಿಕೊಂಡು ಅಕ್ರಮ ಸಾಗಾಟಕ್ಕೆ ಮುಂದಾಗಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.