ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳ ಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಏ.3ರಂದು (ಬುಧವಾರ) 51ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಸಂಜೆ 6.40ಕ್ಕೆ ಗೋಧೂಳಿ ಲಗ್ನ ಮುಹೂರ್ತದಲ್ಲಿ 201 ಜೋಡಿ ವಧು–ವರರು ದಾಂಪತ್ಯ ಜೀವನಕ್ಕೆ ಪಾದರ್ಪಣೆ ಮಾಡಲು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ.
ಏ.2ರಂದು ದಾಖಲೆ ಪರಿಶೀಲಿಸಿ ವಧುವಿಗೆ ಸೀರೆ, ರವಿಕೆ ಕಣ ಹಾಗೂ ವರನಿಗೆ ಧೋತಿ-ಶಾಲು ನೀಡಲಾಗುವುದು.
ಬುಧವಾರ ಸಂಜೆ 5ರಿಂದ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು, ಅಮೃತವರ್ಷಿಣಿ ಸಭಾಭವನಕ್ಕೆ ಹೋಗುವರು. ಅಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಚಿತ್ರನಟ ತೂಗುದೀಪ ದರ್ಶನ್ ಅವರು ಮಂಗಳಸೂತ್ರ ವಿತರಿಸುವರು.
ವರದಕ್ಷಿಣೆ ಹಾಗೂ ಮದುವೆಗಾಗಿ ಆಗುವ ದುಂದುವೆಚ್ಚ ತಡೆಯುವ ಉದ್ದೇಶದಿಂದ ಧರ್ಮಸ್ಥಳದಲ್ಲಿ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಪ್ರಾರಂಭಿಸಲಾಗಿತ್ತು. 50 ವರ್ಷಗಳಲ್ಲಿ 12,576 ಜೋಡಿಗಳು ವಿವಾಹವಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.