ADVERTISEMENT

ಪುತ್ತೂರು | ಅಘಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 25 ಮೇ 2024, 15:28 IST
Last Updated 25 ಮೇ 2024, 15:28 IST
<div class="paragraphs"><p> ಮಂಜುಶ್ರೀ</p></div>

ಮಂಜುಶ್ರೀ

   

ಪುತ್ತೂರು: ಕೆಲವು ದಿನಗಳ ಹಿಂದೆ ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಕೂವೆತ್ತಿಲ ಎಂಬಲ್ಲಿ ನಡೆದಿದ್ದ ರಸ್ತೆ ಅಫಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರಿ, ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತಪಟ್ಟ ಯುವತಿ.

ADVERTISEMENT

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆಲ್ಟೊ ಕಾರು ಮತ್ತು ಆಕ್ಟೀವಾ ನಡುವೆ ಡಿಕ್ಕಿ ಸಂಭವಿಸಿ ಮಂಜುಶ್ರೀ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.