ಪುತ್ತೂರು (ದಕ್ಷಿಣ ಕನ್ನಡ): ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಮಹಿಳೆಯೊಬ್ಬರು ಆ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ್ದಾರೆ.
ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬುವರು ತನ್ನ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪೇಂಟಿಂಗ್ ಕೆಲಸ ಮಾಡುವ ಪತಿ ಸಲೀಂ ಅವರಿಗೆ ಸ್ಕೂಟರ್ ಖರೀದಿ ಮಾಡಿದ್ದಾರೆ. ಸಲೀಂ ಅವರು ದೂರದ ಊರುಗಳಿಗೆ ಪೇಂಟಿಂಗ್ ಕೆಲಸಕ್ಕೆ ಹೋಗುತ್ತಿರುತ್ತಾರೆ.
ಸಲೀಂ ಅವರು ಪತ್ನಿ ನೀಡಿದ ಸ್ಕೂಟರ್‌ನಲ್ಲೇ ಬಂದು ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿಯಾಗಿ, ‘ಗೃಹಲಕ್ಷ್ಮಿ ಹಣದಿಂದ ನನ್ನ ಬಾಳು ಬೆಳಗಿದೆ’ ಎಂದು ಸರ್ಕಾರ ಹಾಗೂ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಅಶೋಕ್ ಕುಮಾರ್ ರೈ ಅವರು ಸಲೀಂ ಅವರನ್ನು ಸನ್ಮಾನಿಸಿದರು.
ಸಲೀಂ ಅವರು ಸ್ಕೂಟರ್ ಮೇಲೆ ‘ಆರ್ಥಿಕ ನೆರವು ಗೃಹಲಕ್ಷ್ಮಿ’ ಎಂಬ ಫಲಕ ಹಾಕಿದ್ದು, ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮಿಹೆಬ್ಬಾಳ್‌ಕರ ಹಾಗೂ ಶಾಸಕ ಅಶೋಕ್ ರೈ ಅವರ ಚಿತ್ರ ಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.