ADVERTISEMENT

ಮುಡಿಪು: ಗದ್ದೆಯಲ್ಲಿ ಪಾಠ ಕೇಳಿದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 13:35 IST
Last Updated 4 ಜುಲೈ 2024, 13:35 IST
ಯು.ಟಿ.ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಯು.ಟಿ.ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು   

ಮುಡಿಪು: ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ, ಕನ್ನಡ ಸಾಹಿತ್ಯ ಪರಿಷತ್‌ನ ಉಳ್ಳಾಲ ತಾಲ್ಲೂಕು ಘಟಕ, ನಾಗಬ್ರಹ್ಮ ಪ್ರಗತಿಪರ ಸ್ವಸಹಾಯ ಸಂಘದ ಆಶ್ರಯದಲ್ಲಿ ಶಾಲಾ‌ ಮಕ್ಕಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸುವ ಜಾನಪದ ಸಂಭ್ರಮ ಕಾರ್ಯಕ್ರಮ ಕೊಣಾಜೆಯ ಕಲ್ಲಿಮಾರು ಬಳಿಯ ಕೆಳಗಿನ ಮನೆ ಗದ್ದೆಯಲ್ಲಿ ನಡೆಯಿತು.

ಸರ್ಕಾರಿ ಪ್ರೌಢಶಾಲೆ ಕೊಣಾಜೆಪದವು, ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಪದವಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಕೃಷಿ ಪಾಠ

ಪಂಚಾಯಿತಿ ಮಾಜಿ ಸದಸ್ಯೆ ಮುತ್ತು ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪಾಡ್ದನ, ತುಳುನಾಡಿನ‌ ಕೃಷಿ ಸಂಸ್ಕೃತಿ, ಕೃಷಿಯ ಮಹತ್ವದ ಬಗ್ಗೆ ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರ್ ವಿವರಿಸಿದರು.

ADVERTISEMENT
ನೇಜಿ ನೆಡುವ ಪ್ರಾತ್ಯಕ್ಷಿಕೆ ನಡೆಯಿತು

ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ, ಕೊಣಾಜೆ ಪಂಚಾಯಿತಿ ಮಾಜಿ ಅಧ್ಯಕ್ಷ ಅಚ್ಯುತ ಗಟ್ಟಿ ಅವರು ಗದ್ದೆಗಿಳಿದ ವಿದ್ಯಾರ್ಥಿಗಳಿಗೆ ನೇಜಿ ತೆಗೆಯುವ, ನೇಜಿ ನೆಡುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು.

ಗದ್ದೆಯಲ್ಲಿ ವಿದ್ಯಾರ್ಥಿಗಳ ಸಂಭ್ರಮ

ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್ ಮಾತನಾಡಿದರು.

ಕೆಸರುಗದ್ದೆ ಕ್ರೀಡೆಯಲ್ಲಿ ವಿದ್ಯಾರ್ಥಿಗಳು

ಕನ್ನಡ ಸಾಹಿತ್ಯ ಪರಿಷತ್ತಿನ ಉಳ್ಳಾಲ ಘಟಕದ ಅಧ್ಯಕ್ಷ ಧನಂಜಯ‌ ಕುಂಬ್ಳೆ, ಮುಖಂಡ ಅಬ್ದುಲ್ ರಹಿಮಾನ್ ಕೋಡಿಜಾಲ್,‌ ಉಳ್ಳಾಲ ಜಮಿಯತ್‌ ಉಲ್‌ ಫಲಾಹ್ ಅಧ್ಯಕ್ಷ ಕೆ.ಕೆ.ನಾಸೀರ್, ಮಂಗಳ ಗ್ರಾಮೀಣ ಯುವಕ ಸಂಘದ ಅಧ್ಯಕ್ಷ ಎ.ಕೆ.ಅಬ್ದುಲ್ ರಹಿಮಾನ್, ಕೊಣಾಜೆ ಪದವು ಶಾಲೆಯ ಮುಖ್ಯ ಶಿಕ್ಷಕಿ ಗಾಯತ್ರಿ, ಪಂಚಾಯಿತಿ ಸದಸ್ಯ ದೇವಣ್ಣ ಶೆಟ್ಟಿ, ಕೃಷಿಕ ದೇವದಾಸ್‌ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.