ADVERTISEMENT

ರಾಮ ಮಂದಿರ: 55 ಸಾವಿರ ಮನೆಗೆ ಅಕ್ಷತೆ ವಿತರಣೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2024, 16:14 IST
Last Updated 19 ಜನವರಿ 2024, 16:14 IST
<div class="paragraphs"><p>ರಾಮ ಮಂದಿರ</p></div>

ರಾಮ ಮಂದಿರ

   

– ಸಾಂದರ್ಭಿಕ ಚಿತ್ರ (ಪಿಟಿಐ)

ಬಂಟ್ವಾಳ: ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹ ಪ್ರತಿಷ್ಠಾಪನೆಗೊಳ್ಳುವ ಹಿನ್ನೆಲೆಯಲ್ಲಿ ತಾಲ್ಲೂಕಿನ 55 ಸಾವಿರ ಮನೆಗಳಿಗೆ ಭೇಟಿ ನೀಡಿದ 8 ಸಾವಿರ ಮಂದಿ ಕಾರ್ಯಕರ್ತರು ಅಕ್ಷತೆ ವಿತರಿಸಿದ್ದಾರೆ.

ADVERTISEMENT

ಅಯೋಧ್ಯೆಯಲ್ಲಿ ಇದೇ 22ರಂದು ನಡೆಯುವ ಪ್ರತಿಷ್ಠಾ ಕಾರ್ಯದ ನೇರ ಪ್ರಸಾರವನ್ನು ಒಂದು ಲಕ್ಷ ಮಂದಿ ವೀಕ್ಷಿಸಲು ಪೊಳಲಿ ಕ್ಷೇತ್ರ, ಪೊಳಲಿ ಶ್ರೀ ರಾಮಕೃಷ್ಣ ತಪೋವನ, ಸರಪಾಡಿ ಶರಭೇಶ್ವರ ದೇವಸ್ಥಾನ, ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನ, ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನ, ಬಿ.ಸಿ.ರೋಡು ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನ ಮುಂತಾಗಿ 100 ಧಾರ್ಮಿಕ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ವಕೀಲ ಪ್ರಸಾದ್ ಕುಮಾರ್ ರೈ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಧಾರ್ಮಿಕ ಕೇಂದ್ರಗಳನ್ನು ಶುಚಿಗೊಳಿಸಲಾಗುತ್ತಿದೆ. 22ರಂದು ಅಂಗಡಿಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ರಜೆ ನೀಡುವಂತೆ ವಿನಂತಿಸಿಕೊಳ್ಳಲಾಗಿದೆ ಎಂದರು. ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ, ಮುಖಂಡರಾದ ಹರೀಶ ಅಮ್ಟಾಡಿ, ಋತಿಕ್ ಬಂಟ್ವಾಳ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.