ADVERTISEMENT

‘ಅಮೃತರು ಸಾಹಿತ್ಯ ಲೋಕದ ಮೇರು ಪರ್ವತ’

​ಪ್ರಜಾವಾಣಿ ವಾರ್ತೆ
Published 10 ಜನವರಿ 2024, 8:43 IST
Last Updated 10 ಜನವರಿ 2024, 8:43 IST
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ಅಮೃತ ಸೋಮೇಶ್ವರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ಅಮೃತ ಸೋಮೇಶ್ವರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು   

ಮಂಗಳೂರು: ಕಾವ್ಯ, ಕಥೆ, ನಾಟಕ, ಯಕ್ಷಗಾನ ಸಹಿತ ಸಾರಸ್ವತ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಅಮೃತ ಸೋಮೇಶ್ವರರು ಸಾಹಿತ್ಯ ಲೋಕದ ಮೇರು ಪರ್ವತ. ಸದಾ ಹೊಸತನವನ್ನು ನಿರೂಪಿಸಿದ ಅವರು ರಾಷ್ಟ್ರಕವಿಯಾಗುವ ಎಲ್ಲ ಅರ್ಹತೆ ಹೊಂದಿದ್ದರು ಎಂದು ಸಾಹಿತಿ ಪ್ರಭಾಕರ ನೀರುಮಾರ್ಗ ಹೇಳಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಇಲ್ಲಿ ಆಯೋಜಿಸಿದ್ದ ಜಾನಪದ ತಜ್ಞ ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾಲಯದ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಚಾಲಕ ಮಾಧವ ಎಂ.ಕೆ., ಸಾಹಿತಿ ಮುದ್ದು ಮೂಡುಬೆಳ್ಳೆ, ಪತ್ರಕರ್ತ ಭಾಸ್ಕರ ರೈ ಕಟ್ಟ, ತುಳುನಾಡ ರಕ್ಷಣಾ  ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಸಾಮಾಜಿಕ ಕಾರ್ಯಕರ್ತ ಮಹೇಶ್ ನುಡಿ ನಮನ ಸಲ್ಲಿಸಿದರು.

ADVERTISEMENT

ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಚಿಲಿಂಬಿ ಬಾಲಕರ ಶಾರದಾ ಮಹೋತ್ಸವ ಟ್ರಸ್ಟ್‌ನ ಅಧ್ಯಕ್ಷ ಸುಬ್ರಾಯ ನಾಯಕ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಖಜಾಂಜಿ ಪುಷ್ಪರಾಜ್ ಬಿ.ಎನ್., ಜಾನಪದ ಪರಿಷತ್‌ನ ಅಧ್ಯಕ್ಷ ಪ್ರವೀಣ್‌ಕುಮಾರ್ ಕೊಡಿಯಾಲ್‌ಬೈಲ್, ಪ್ರಮುಖರಾದ ಶೈಲೇಶ್ ಕುಲಾಲ್, ಎಂ.ಎಸ್.ರಾವ್ ಶರವು, ಟಿ.ವಿ.ಅಂಬು, ಭಾಸ್ಕರ ಸಾಲಿಯಾನ್, ಹರೀಶ್.ಎ., ಪುರುಷೋತ್ತಮ ಸಾಂತುವಾಲ್, ಪ್ರಶಾಂತ್ ಕಡಬ ಇದ್ದರು.

ಪರಿಮಳಾ ರಾವ್ ಸ್ವಾಗತಿಸಿದರು. ಗೀತಾ ಲಕ್ಷ್ಮೀಶ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.