ADVERTISEMENT

ಗಲಭೆ ಪ್ರಕರಣಗಳ ಸೂತ್ರಧಾರರನ್ನು ಪತ್ತೆ ಹಚ್ಚಿ: ರಮಾನಾಥ ರೈ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 8:26 IST
Last Updated 19 ಆಗಸ್ಟ್ 2022, 8:26 IST
ರಮಾನಾಥ ರೈ
ರಮಾನಾಥ ರೈ    

ಮಂಗಳೂರು: ‘ಗಲಭೆ ಪ್ರಕರಣಗಳಲ್ಲಿ ಭಾಗಿಯಾಗುವವರ ಆಸ್ತಿ ಮುಟ್ಟುಗೋಲು ಹಾಕುವ ಮೊದಲು ನಿಮಗೆ ಸಾಧ್ಯ ಇದ್ದರೆ ಪ್ರಕರಣದ ಸೂತ್ರಧಾರರನ್ನು ಪತ್ತೆ ಹಚ್ಚಿ, ಅವರನ್ನು ಶಿಕ್ಷೆಗೆ ಒಳಪಡಿಸಿದರೆ ಗಲಭೆಗಳು ಸಂಪೂರ್ಣ ನಿಲ್ಲುತ್ತವೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ, ರಾಜ್ಯದ ಕಾನುನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಗೆ ಸಲಹೆ ಸಲಹೆ ಮಾಡಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಲಭೆ ಪ್ರಕರಣಗಳ ಸೂತ್ರಧಾರರೇ ಕುಮ್ಮಕ್ಕುದಾರರೂ ಆಗಿದ್ದಾರೆ. ಎಡಿಜಿಪಿ ಅವರು ಸ್ವತಂತ್ರವಾಗಿ ತನಿಖೆ ನಡೆಸಿ, ಇಂತಹವರನ್ನು ಮಟ್ಟಹಾಕಬೇಕು’ ಎಂದರು.

‘ರಾಜ್ಯದಲ್ಲಿ ಅನೇಕ ಹತ್ಯೆ ಪ್ರಕರಣಗಳು ನಡೆದಿವೆ. ಆದರೆ, ಈ ಪ್ರಕರಣಗಳ ಆರೋಪಿಗಳಲ್ಲಿ ಯಾರೂ ಕಾಂಗ್ರೆಸ್ ಕಾರ್ಯಕರ್ತರು ಇಲ್ಲ. ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವವರಲ್ಲಿ ಹೆಚ್ಚಿನವರು ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಕಾರ್ಯಕರ್ತರು ಮತ್ತು ಎಸ್‌ಡಿಪಿಐ ಕಾರ್ಯಕರ್ತರು’ ಎಂದರು.

ADVERTISEMENT

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊಡಗಿಗೆ ಭೇಟಿ ನೀಡಿದ ವೇಳೆ ಅವರ ಮೇಲೆ ಮೊಟ್ಟೆ ಎಸೆದ ಘಟನೆ ಖಂಡನೀಯ. ಆರೋಪಿಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಮತ್ತು ಸಿದ್ದರಾಮಯ್ಯ ಅವರ ಕ್ಷಮೆ ಯಾಚಿಸಬೇಕು’ ಎಂದರು.

ವಿಧಾನ ಪರಿಷತ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ‘ನೆಲೆ ಕಳೆದುಕೊಳ್ಳುವ ಭಯದಿಂದ ಬಿಜೆಪಿ ಚುನಾವಣೆ ಸಮೀಪಿಸುತ್ತಿರುವಾಗ ಅನಗತ್ಯ ಗಲಾಟೆ ಸೃಷ್ಟಿಸುತ್ತಿದೆ’ ಎಂದರು, ಪಕ್ಷದ ಪ್ರಮುಖರಾದ ಪ್ರಕಾಶ್ ಸಾಲ್ಯಾನ್, ಬೇಬಿ ಕುಂದರ್, ನೀರಜ್ ಪಾಳ್, ನವೀನ್ ಡಿಸೋಜ, ಸಲೀಂ, ಹರಿನಾಥ, ಶಶಿಧರ ಹೆಗ್ಡೆ, ಶಾಲೆಟ್ ಪಿಂಟೊ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.