ಮಂಗಳೂರು: ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ವಿರುದ್ಧ ಕೋಮುಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದ ಮೇಲೆ ನಗರ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದನ್ನು ಬಜರಂಗದಳ ಖಂಡಿಸಿದೆ.
‘ಹಿಂದೂ ಸಂಘಟನೆಯ ನಾಯಕರನ್ನು ಧಮನಿಸಲು ಪ್ರಯತ್ನಿಸಿದರೆ, ತಕ್ಕ ಉತ್ತರ ಕೊಡಲಾಗುವುದು’ ಎಂದು ಸಂಘಟನೆ ಎಚ್ಚರಿಕೆ ನೀಡಿದೆ.
‘ಮುಸ್ಲಿಮರ ಓಲೈಕೆ ಸಲುವಾಗಿ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಇದನ್ನು ಬಜರಂಗದಳ ಬಲವಾಗಿ ಖಂಡಿಸುತ್ತದೆ’ ಎಂದು ಬಜರಂಗದಳದ ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಧಾರ್ಮಿಕ ದತ್ತಿಇಲಾಖೆಯ ನಿಯಮಗಳ ಪ್ರಕಾರ ದೇವಸ್ಥಾನದ ವಠಾರ ಮತ್ತು ರಥಬೀದಿಯಲ್ಲಿ ಹಿಂದುಯೇತರರು ವ್ಯಾಪಾರ ನಡೆಸುವುದಕ್ಕೆ ಅವಕಾಶವಿಲ್ಲ. ಹಾಗಾಗಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಹಿಂದೂ ವ್ಯಾಪಾರಿಗಳ ಬೆಂಬಲಕ್ಕೆ ನಿಂತ ಶರಣ್ ಪಂಪ್‌ವೆಲ್ ವಿರುದ್ಧ ಹಾಕಿರುವ ಸುಳ್ಳು ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು‘ ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.