ಬಂಟ್ವಾಳ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಇಲ್ಲಿನ ಪುರಸಭೆಯನ್ನು ಬಯಲು ಶೌಚಮುಕ್ತ ಮತ್ತು ತ್ಯಾಜ್ಯ ಮುಕ್ತ ನಗರ ಎಂದು ಘೋಷಿಸಿದ್ದು, ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಘೋಷಣೆಗೆ ಅಗತ್ಯವಿರುವ ಷರತ್ತುಗಳನ್ನು ಪೂರೈಸಿದೆ. ಈ ಬಗ್ಗೆ ಪ್ರತಿ ವರ್ಷ ಮರು ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬೇಕಿದ್ದು, ಆಕ್ಷೇಪಣೆಗಳಿದ್ದರೆ 15 ದಿನಗಳೊಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ, ಪ್ಲಾಸ್ಟಿಕ್ ಕಸ ಎಸೆಯುವುದು, ಕಸ ಬೇರ್ಪಡಿಸದಿರುವುದು, ಸಾರ್ವಜನಿಕ ಸ್ಥಳದಲ್ಲಿ ಮಲ–ಮೂತ್ರ ವಿಸರ್ಜನೆ, ಹಳೆಯ ಮನೆ ಸಾಮಗ್ರಿಗಳನ್ನು ರಸ್ತೆ ಬದಿ ತಂದು ಸುರಿಯುವುದು ಕಂಡು ಬಂದರೆ ₹ 100 ರಿಂದ ₹ 25ಸಾವಿರದ ವರೆಗೆ ದಂಡ ವಿಧಿಸಲಾಗುವುದು ಎಂದು ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.